janadhvani

Kannada Online News Paper

SSLC ಮತ್ತು PUC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು,ಜ.7: ಕೊರೋನಾ ಆತಂಕದಲ್ಲಿಯೇ ಕಳೆದ ಒಂದು ವರ್ಷದ ಬಳಿಕ ಶಾಲೆ, ಕಾಲೇಜುಗಳು ಆರಂಭವಾಗಿದೆ. ಏತನ್ಮಧ್ಯೆ 2020-21ರ ಶೈಕ್ಷಣಿಕ ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಠ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.

error: Content is protected !! Not allowed copy content from janadhvani.com