ಮೈಸೂರು : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ರಾಜ್ಯ ನಾಯಕರ ಜಿಲ್ಲಾ ಸಂದರ್ಶನ ಹಾಗೂ ಸಮಾಲೋಚನೆ ಇಂದು ಮೈಸೂರಿನ ಕ್ಯಾತಮಾರನಹಳ್ಳಿ ಗುಲ್ಶನೇ ಪಂಜ್‌ದನ್ ಮದ್ರಸಾ ಸಭಾಂಗಣದಲ್ಲಿ ನಡೆಯಿತು.
ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಪ್ರಭಾರ ಅಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಕಾವಳಕಟ್ಟೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಡಗು ಉದ್ಘಾಟಿಸಿದರು. ಮೈಸೂರು ಜಿಲ್ಲಾ ಎಸ್ಸೆಸ್ಸೆಫ್ ಅಧ್ಯಕ್ಷ ಮೌಲಾನಾ ಫಾರೂಖ್ ಸುಬ್‌ಹಾನಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ರಾಜ್ಯ ಎಸ್ಸೆಸ್ಸೆಫ್ ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ, ಕಾರ್ಯದರ್ಶಿ ಅಶ್ರಫ್ ರಝಾ ಅಮ್ಜದಿ, ರಾಜ್ಯ ನಾಯಕರಾದ ಸಫ್ವಾನ್ ಚಿಕ್ಕಮಗಳೂರು, ಕಬೀರ್ ಅಮ್ಜದಿ, ಇಮ್ರಾನ್ ಸುಲ್ತಾನಿ ಮೈಸೂರು ಉಪಸ್ಥಿತರಿದ್ದರು.

ಮೈಸೂರು ಜಿಲ್ಲೆಯಾದ್ಯಂತ ಸಂಘಟನೆಯನ್ನು ಬಲಿಷ್ಠಗೊಳಿಸುವ ಬಗ್ಗೆ ಚರ್ಚೆ ಮಾಡಲಾಯಿತು. ಎಸ್ಸೆಸ್ಸೆಫ್ ರಾಜ್ಯ ನಾಯಕ ಮುನೀರ್ ಮದನಿ ಮೈಸೂರು ಕಾರ್ಯಕ್ರಮವನ್ನು ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ