ಮಂಗಳೂರು: ದ.ಕ. ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾಗಿ ಕೆ.ಕೆ.ಸಾಹುಲ್ ಹಮೀದ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ, ಅಲ್ಪ ಸಂಖ್ಯಾತ ವಿಭಾಗದ ಚೇರ್ಮನ್ ಆದ ಶ್ರೀ ವೈ. ಸಯೀದ್ ಅಹ್ಮದ್ ರವರು, ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಜ. ನದೀಮ್ ಜಾವೇದ್ ರವರ ಶಿಫಾರಸು ಮೇರೆಗೆ,ಬೆಳ್ತಂಗಡಿ ಮೂಲದ ಕೆ.ಕೆ.ಸಾಹುಲ್ ಹಮೀದ್ ರವರನ್ನು,ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ.
ಹಮೀದ್ ರವರು ಈ ಹಿಂದೆ ಬೆಳ್ತಂಗಡಿ ತಾಲೂಕು ಮತ್ತು ದ.ಕ.ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಹಲವು ಹುದ್ದೆಗಳನ್ನು ಹೊಂದಿದ್ದರು. ಜಿ.ಪ.ಸದಸ್ಯರಾಗಿದ್ದ ಸಾಹುಲ್ ಹಮೀದ್ ರವರು ಈ ಹಿಂದೆ ದ.ಕ.ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಮಂಗಳೂರಿನ ಪ್ರತಿಷ್ಠಿತ ಮುಸ್ಲಿಮ್ ಶಿಕ್ಷಣ ಪೋಷಿತ ಸಂಸ್ಥೆಯಾದ ಜಮ್ಮಿಯತುಲ್ ಫಲಾಹ್ ಅಧ್ಯಕ್ಷರು ಕೂಡ ಆಗಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್