ರಿಯಾದ್: ಸ್ವತಂತ್ರ ಪ್ಯಾಲೇಸ್ಟಿನಿಯನ್ ರಾಷ್ಟ್ರದ ನಿರ್ಮಾಣಗೊಳ್ಳದೆ ಇಸ್ರೇಲ್ ಜೊತೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗುವುದಿಲ್ಲ ಎಂದು ಸೌದಿ ವಿದೇಶಾಂಗ ಸಚಿವರು ಹೇಳಿದರು.ಕೆಲವು ಅರಬ್ ರಾಷ್ಟ್ರಗಳು ಇಸ್ರೇಲ್ ಜೊತೆ ಶಾಂತಿ ಒಪ್ಪಂದಗಳಿಗೆ ಸಹಿ ಹಾಕಿದ್ದು, ಶುಭ ನಿರೀಕ್ಷೆ ಇದೆ. ಸೌದಿ ಯಾವತ್ತೂ ಶಾಂತಿ ಪ್ರಿಯ ರಾಷ್ಟ್ರವಾಗಿದೆ ಎಂದು ಅವರು ಹೇಳಿದರು.
ಕೆಲವು ಅರಬ್ ರಾಷ್ಟ್ರಗಳು ಇಸ್ರೇಲ್ ಜೊತೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿವೆ,ಈ ಪ್ರಕಾರ ಆ ದೇಶಗಳು ಮತ್ತು ಇಸ್ರೇಲ್ ಜೊತೆ ರಾಜತಾಂತ್ರಿಕ ಸಂಬಂಧಗಳು ಬಲಗೊಂಡಿದೆ. ಆದರೆ ಪೂರ್ವ ಜೆರುಸಲೆಮ್ ತನ್ನ ರಾಜಧಾನಿಯಾಗಿ ಸ್ವತಂತ್ರ ಪ್ಯಾಲಸ್ತೀನ್ ರಾಷ್ಟ್ರವನ್ನು ಸ್ಥಾಪಿಸದೆ ಸೌದಿ ಅರೇಬಿಯಾ ಇಸ್ರೇಲ್‌ನೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲು ಸಿದ್ಧವಾಗಿಲ್ಲ ಎಂದು ವಿದೇಶಾಂಗ ಸಚಿವ ಪ್ರಿನ್ಸ್ ಫೈಸಲ್ ಬಿನ್ ಫರ್ಹಾನ್ ಹೇಳಿದ್ದಾರೆ.
ಅರಬ್ ಶಾಂತಿ ಯೋಜನೆಯಡಿ ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸಾಧ್ಯವಾಗಬೇಕಿದೆ.ಇಸ್ರೇಲ್ ಇತರ ಅರಬ್ ರಾಷ್ಟ್ರಗಳೊಂದಿಗೆ ಶಾಂತಿ ಒಪ್ಪಂದಗಳಿಗೆ ಸಹಿ ಹಾಕುವ ಮೂಲಕ ಮಧ್ಯಪ್ರಾಚ್ಯದಲ್ಲಿ ಶಾಂತಿಗೆ ದಾರಿ ಮಾಡಿಕೊಡುತ್ತದೆ ಎಂಬ ನಿರೀಕ್ಷೆಯಿದೆ. ಇಸ್ರೇಲ್ ಜೊತೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕುವ ನಿರ್ಧಾರವು ಪ್ರತಿ ದೇಶದ ಸಾರ್ವಭೌಮತ್ವದ ವಿಷಯವಾಗಿದೆ. ಇದು ಅಪೇಕ್ಷಿತ ಪರಿಣಾಮವನ್ನು ಬೀರಲಿದೆ ಎಂದು ಅವರು ಆಶಿಸಿದರು.