ಸೌದಿ ಅರೇಬಿಯಾ: ಜುಬೈಲ್ ನ ಪ್ರತಿಷ್ಠಿತ ಕಂಪನಿ ಯುನೈಟೆಡ್’ಟೆಕ್ ನಲ್ಲಿ ಉತ್ತಮ ಹುದ್ದೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಂಗಳೂರು ಬೆಂಜನಪದವು ನಿವಾಸಿ ಇಸ್ಮಾಯಿಲ್ ಅಬ್ದುಲ್ ಹಮೀದ್ (ಹನೀಫ್) ಎಂಬುವವರು ಜನವರಿ 30 ರಂದು ಅನಾರೋಗ್ಯದಿಂದ ಮರಣಹೊಂದಿರುತ್ತಾರೆ. ಉತ್ತಮ ಗುಣ ನಡತೆಯ ವ್ಯಕ್ತಿತ್ವ ಹೊಂದಿದ್ದ ಇವರು ಸಾಂತ್ವನ ಹಾಗೂ ಹಲವಾರು ಸಂಘಸಂಸ್ಥೆ ಸ್ಥಾಪನೆಗಳಿಗೆ ಸಹಾಯಸ್ತ ನೀಡುತ್ತಿದ್ದ ಕೊಡುಗೈ ದಾನಿಯಾಗಿದ್ದರು. ಮೃತರು ತಾಯಿ, ಹೆಂಡತಿ ಹಾಗೂ ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಮರಣೋತ್ತರ ಕ್ರಿಯೆಗೆ ಬೇಕಾದ ವ್ಯವಸ್ಥೆ ಕಲ್ಪಿಸಲು ಕೂಡಲೆ ಸ್ಪಂದಿಸಿ ಕಾರ್ಯ ಪ್ರವರ್ತರಾದ ಕೆ.ಸಿ.ಎಫ್ ಜುಬೈಲ್ ಹಾಗು ದಮ್ಮಾಮ್ ಝೋನ್ ಸಾಂತ್ವನ ತಂಡವು ಭಾರತೀಯ ರಾಯಬಾರಿ ಕಛೇರಿ ಹಾಗೂ ಊರಿನಿಂದ ಬೇಕಾದ ದಾಖಲೆ ಪತ್ರವನ್ನು ತ್ವರಿತ ವೇಗದಲ್ಲಿ ಸರಿಪಡಿಸಿ ಕೇವಲ 1 ದಿವಸದೊಳಗಾಗಿ ಜನವರಿ 31ರಂದು ಮಗ್ರಿಬ್ ನಮಾಜಿನ ಬಳಿಕ ಜುಬೈಲ್ ನಲ್ಲಿ ದಫನ ಕಾರ್ಯ ನಿರ್ವಹಿಸಲಾಯಿತು.
ಈ ಒಂದು ಉತ್ತಮ ಕಾರ್ಯದಲ್ಲಿ ಕೆ.ಸಿ.ಎಫ್ ನೊಂದಿಗೆ ಸಹಕರಿಸಿದ ಝೋನ್ ಸಾಂತ್ವನ ಕನ್ವೀನರ್ ಬಾಷಾ ಗಂಗಾವಳಿ, ಜುಬೈಲ್ ಸಾಂತ್ವನ ನಾಯಕರಾದ ನೌಫಲ್ ಮುಲ್ಕಿ, ಸಫ್ವಾನ್ ಮುಕ್ಕ, ಮತ್ತು ಸಾಮಾಜಿಕ ಕಾರ್ಯಕರ್ತ ಇಬ್ರಾಹಿಂ (ಇಬ್ಬ) ಬಜ್ಪೆ ಹಾಗೂ ಯುನೈಡೆಟ್ ಅಬ್ದುರ್ರಹ್ಮಾನ್ ಬಜ್ಪೆ ಇವರುಗಳಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ.
ಕೆ.ಸಿ.ಎಫ್ ಜುಬೈಲ್ ಶೋಲ ಸೆಕ್ಟರ್ ಅಧ್ಯಕ್ಷರಾದ ಅಬೂಬಕರ್ ಮದನಿ ಹಾಗೂ ಹಲವು ನಾಯಕರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಮೃತರಿಗಾಗಿ ದುಆ ನೆರೆವೇರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು