ಪುದುಚೇರಿ: ಯಾರಾದರೂ ನನಗೆ 5 ಕೋಟಿ ರೂಪಾಯಿ ಕೊಟ್ಟರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲೆ ಮಾಡುತ್ತೇನೆ ಎಂದು ಫೇಸ್ಬುಕ್ನಲ್ಲಿ ವ್ಯಕ್ತಿಯೊಬ್ಬ ಪೋಸ್ಟ್ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.
ಪುದುಚೆರಿಯ ಆರ್ಯಂಕುಪ್ಪಂ ಗ್ರಾಮದ ನಿವಾಸಿಯಾಗಿರುವ ಆರೋಪಿಯನ್ನು 43 ವರ್ಷದ ಸತ್ಯ ಆನಂದಂ ಎಂದು ಗುರುತಿಸಲಾಗಿದೆ. ಫೇಸ್ಬುಕ್ನಲ್ಲಿ ಇಂಥದ್ದೊಂದು ಪೋಸ್ಟ್ ಹಾಕಿದ್ದ. ಕಾರು ಚಾಲಕನೋರ್ನ ಈ ಪೋಸ್ಟ್ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದ.
ಈ ಪೋಸ್ಟ್ ಸಾಕಷ್ಟು ವೈರಲ್ ಆಗಿತ್ತು. ನಂತರ ಪೊಸ್ಟ್ ಕುರಿತಂತೆ ದೂರು ಬಂದ ಮೇಲೆ ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಖಾತೆಯ ಮೂಲ ಪರಿಶೀಲಿಸಿದ್ದಾರೆ. ಆತನ ಜಾಡು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದು ಅವನನ್ನು ಬಂಧಿಸಲಾಗಿದೆ.
ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು, ಈ ಪೋಸ್ಟ್ ಹಾಕಿರುವ ಉದ್ದೇಶವೇನು? ತಾನು ಪ್ರಸಿದ್ಧಿಗೆ ಬರುವ ಉದ್ದೇಶದಿಂದ ಹೀಗೆ ಮಾಡಿದ್ದಾನಾ ಅಥವಾ ಇದರ ಹಿಂದೆ ಇನ್ನಾವುದಾದರೂ ದುರುದ್ದೇಶವಿದೆಯೇ ಎಂದು ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.
ಸತ್ಯ ಆನಂದಂ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 505 (1) ಮತ್ತು 505 (2) (ಸಾರ್ವಜನಿಕ ಕಿಡಿಗೇಡಿತನಗಳಿಗೆ ಕಾರಣವಾಗುವ ಹೇಳಿಕೆಗಳನ್ನು ನೀಡುವುದು ಮತ್ತು ವರ್ಗಗಳ ನಡುವೆ ದ್ವೇಷ, ಅಥವಾ ಕೆಟ್ಟ ಇಚ್ಚೆಯನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ