ಫೆಬ್ರವರಿ 15ರಂದು ನಡೆಯಲಿರುವ ಕೆಸಿಎಫ್ ಫೌಂಡೇಶನ್ ಡೇ ಪ್ರಯುಕ್ತ ಜಿದ್ದಾ ಝೋನಲ್ ಅಧೀನದಲ್ಲಿ ಫೆಬ್ರವರಿ 12ರಂದು ಜಿದ್ದಾದ ಜಾಮಿಆದಲ್ಲಿರುವ ಕಿಂಗ್ ಅಬ್ದುಲ್ ಅಝೀಝ್ ಯುನಿವರ್ಸಿಟಿ ಹಾಸ್ಪಿಟಲ್ ನಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಸಲಾಯಿತು.
ಸಯ್ಯಿದ್ ಅಬ್ದುರ್ರಹ್ಮಾನ್ ಅಲ್-ಬುಖಾರಿ ಉಚ್ಚಿಲ ತಂಙಳ್ ರವರ ದುಆದೊಂದಿಗೆ ಬೆಳಿಗ್ಗೆ 8.30ಕ್ಕೆ ಆರಂಭಗೊಂಡ ಶಿಬಿರದಲ್ಲಿ ಒಟ್ಟು 75 ಜನರು ರಕ್ತದಾನ ಮಾಡಿದರು.
ಕೆಸಿಎಫ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ಕೋಶಾಧಿಕಾರಿ ಮುಹಮ್ಮದ್ ಕಲ್ಲರ್ಬೆ, ಜಿದ್ದಾ ಝೋನಲ್ ಸಮಿತಿ ಅಧ್ಯಕ್ಷರಾದ ಇಬ್ರಾಹಿಮ್ ಹಾಜಿ ಕಿನ್ಯಾ, ಪ್ರಧಾನ ಕಾರ್ಯದರ್ಶಿ ಶಂಸುದ್ದೀನ್ ಮಡಂತ್ಯಾರ್, ಕೋಶಾಧಿಕಾರಿ ಸಿದ್ದೀಕ್ ಹಾಜಿ ಬಾಳೆಹೊನ್ನೂರು, ಫಾರೂಕ್ ಸಅದಿ ಹೆಚ್ ಕಲ್ಲು, ಮೂಸಾ ಹಾಜಿ ಕಿನ್ಯಾ, ಇಕ್ಬಾಲ್ ಮದನಿ ತ್ವಾಯಿಫ್, ಶಂಸುದ್ದೀನ್ ಕುಂತೂರು, ಶಾಹುಲ್ ಹಮೀದ್ ಸಾಗರ, ಹಸ್ಸನ್ ಜಾಫರ್, ನಾಸಿರ್ ಹೆಚ್ ಕಲ್ಲು, ಬಶೀರ್ ಗಂಗಾವಳಿ ಹಾಗೂ ಇನ್ನಿತರ ನೇತಾರರು & ಕಾರ್ಯಕರ್ತರು ಭಾಗವಹಿಸಿದ್ದರು.
ಕೆಸಿಎಫ್ ಸಂಘಟಿಸಿದ ಶಿಬಿರಕ್ಕೆ ಸಂಪೂರ್ಣ ಬೆಂಬಲ ಹಾಗೂ ಸಹಕಾರ ನೀಡಿದ ಆಸ್ಪತ್ರೆಯ ಅಧಿಕಾರಿಗಳಿಗೆ ನೆನಪಿನ ಕಾಣಿಕೆ ನೀಡಿ ಅಭಿನಂದನೆ ತಿಳಿಸಲಾಗಿದೆ ಎಂದು ಸಂಘಟಕರು ತಿಳಿಸಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ