ದುಬೈ:ಯುಎಇಯ ಅತಿ ದೊಡ್ಡ ಆರೋಗ್ಯ ಸೇವಾ ಕಂಪನಿಯಾಗಿರುವ ಎನ್‌ಎಂಸಿ ಆರೋಗ್ಯ ಸಂಸ್ಥೆಯಲ್ಲಿನ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೂಲದ ಉದ್ಯಮಿ ಬಿ.ಆರ್. ಶೆಟ್ಟಿಅವರು ವಿಶ್ವದೆಲ್ಲೆಡೆ ಹೊಂದಿರುವ ಆಸ್ತಿ ಮುಟ್ಟುಗೋಲಿಗೆ ಬ್ರಿಟನ್‌ನ ಕೋರ್ಟ್ ಆದೇಶಿಸಿದೆ.
ಅಬುಧಾಬಿ ಕಮರ್ಷಿಲ್ ಬ್ಯಾಂಕ್ (ಎಡಿಬಿಸಿ)ಯ ದೂರಿನ ಹಿನ್ನೆಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ. ಅಬುಧಾಬಿಯಲ್ಲಿ ಮುಖ್ಯ ಕಚೇರಿ ಹೊಂದಿರುವ ಎನ್‌ಎಂಸಿ ಆರೋಗ್ಯ ಸೇವಾ ಕಂಪನಿಯಲ್ಲಿನ ಹಣಕಾಸು ಅವ್ಯವಹಾರ ಕಳೆದ ವರ್ಷ ಬೆಳಕಿಗೆ ಬಂದಿತ್ತು. ಎನ್‌ಎಂಸಿ ಆಸ್ಪತ್ರೆಗಳ ಸಮೂಹ ಎಡಿಬಿಸಿ ಬ್ಯಾಂಕಿಗೆ 7000 ಕೋಟಿಗೂ ಅಧಿಕ ಸಾಲ ಮರುಪಾವತಿ ಮಾಡಬೇಕಿದೆ. ಅಲ್ಲದೇ ಇತರ ಸ್ಥಳೀಯ ಬಾಂಕುಗಳಿಗೆ ನೀಡಬೇಕಿರುವ ಸಾಲದ ಹಣ ಸೇರಿ ಒಟ್ಟು 28,000 ಕೋಟಿ ರು.ಗಿಂತಲೂ ಅಧಿಕ ಮೊತ್ತದ ಹಣಕಾಸು ಅವ್ಯವಹಾರದಲ್ಲಿ ಭಾಗಿ ಆಗಿರುವ ಆರೋಪವನ್ನು ಎನ್‌ಎಂಸಿ ಆಸ್ಪತ್ರೆಗಳ ಸಮೂಹದ ವಿರುದ್ಧ ಹೊರಿಸಲಾಗಿದೆ.
ಈ ಸಂಬಂಧ ಸಂಸ್ಥೆಯ ಮಾಜಿ ಸಿಇಒ ಪ್ರಶಾಂತ್ ಮಂಗತ್ ಹಾಗೂ ಇರರ ಇಬ್ಬರು ಮಾಜಿ ಅಧಿಕಾರಿಗಳ ಆಸ್ತಿ ಜಪ್ತಿಗೂ ಬ್ರಿಟನ್ ಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಸಿಬಿ ಬ್ಯಾಂಕ್ 2020 ಏ.15ರಂದು ಕ್ರಿಮಿನಲ್ ದೂರ ದಾಖಲಿಸಿತ್ತು.
ಮೂಲತಃ ಉಡುಪಿ ಮೂಲದವರಾದ ಬಿ.ಆರ್. ಶೆಟ್ಟಿ1975ರಲ್ಲಿ ಎನ್‌ಎಂಸಿ ಆರೋಗ್ಯ ಸೇವೆ ಸಂಸ್ಥೆಯನ್ನು ಆರಂಭಿಸಿದ್ದರು. ಇದು ಸಂಯುಕ್ತ ಅರಬ್ ಸಂಸ್ಥಾನದಲ್ಲಿ ಅತಿದೊಡ್ಡ ಖಾಸಗಿ ಆರೋಗ್ಯ ಸೇವಾ ಸಂಸ್ಥೆ ಎನಿಸಿಕೊಂಡಿದೆ.
ಇದನ್ನೂ ಓದಿ..
















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ