ಶೀಘ್ರ ಬಿಡುಗಡೆಗೆ ಒತ್ತಾಯಿಸಿ ಉಪತಹಶಿಲ್ದಾರರ ಮೂಲಕ ಮನವಿ ಸಲ್ಲಿಕೆ
ಉಪ್ಪಿನಂಗಡಿ: ಪೆ 19; ರೈತ ಹೋರಾಟವನ್ನು ಬೆಂಬಲಿಸಿ ಟ್ವೀಟ್ ಮಾಡಿದ ಸ್ವಿಡನ್ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ ಬರ್ಗ್ ಟೂಲ್ಕಿಟ್ ವಿಚಾರವಾಗಿ ಕರ್ನಾಟಕದ ಯುವ ಪರಿಸರ ಹೋರಾಟಗಾರ್ತಿ ದಿಶಾ ರವಿಯವರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಉಪ್ಪಿನಂಗಡಿ ನ್ಯಾಷನಲ್ ವುಮೆನ್ಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಉಪ್ಪಿನಂಗಡಿ ನಾಡ ಕಚೇರಿ ಮುಂಭಾಗದಲ್ಲಿ ಭಿತ್ತಿ ಪತ್ರ ಪ್ರದರ್ಶಿಸುವ ಮೂಲಕ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ NWF ಉಪ್ಪಿನಂಗಡಿ ವಲಯಾಧ್ಯಕ್ಷೆ ಮುಮ್ತಾಜ್ ಮಾತನಾಡಿ ದೇಶದಾದ್ಯಂತ ನ್ಯಾಯಪರ ಹೋರಾಟಗಾರರು ಮತ್ತು ಮಹಿಳೆಯರ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿದ್ದು, ರೈತ ವಿರೋಧಿ, ಜನವಿರೋಧಿ ಕಾನೂನುಗಳನ್ನು ತಂದು ದೇಶವನ್ನು ಸಂಕಷ್ಟಕ್ಕೆ ಸಿಲುಕಿಸುವ ಪ್ರಯತ್ನ ಮೋದಿ ನೇತೃತ್ವದ ಕೇಂದ್ರ ಸರಕಾರ ನಡೆಸುತ್ತಿದ್ದು, ಇದರ ವಿರುದ್ಧ ಹೋರಾಟ ನಡೆಸುವ ರೈತರು ಮತ್ತು ಹೋರಾಟಗಾರರನ್ನು ಇಲ್ಲಸಲ್ಲದ ಆರೋಪಗಳನ್ನು ಹೊರಿಸುವ ಮೂಲಕ ಜೈಲಿಗಟ್ಟಿ ಹೋರಾಟವನ್ನು ತಡೆಯುವ ಪ್ರಯತ್ನ ಮಾಡುತ್ತಿದೆ.
ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನ ಕೂಡಾ ಇದರ ಮುಂದುವರಿದ ಭಾಗವಾಗಿದೆ. ಆದಷ್ಟು ಬೇಗ ದಿಶಾ ರವಿಯನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯ ಮಾಡಿದರು.
ಈ ಸಂದರ್ಭದಲ್ಲಿ ಉಪ್ಪಿನಂಗಡಿ ಉಪ ತಹಶಿಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ನ್ಯಾಷನಲ್ ವುಮೆನ್ಸ್ ಫ್ರಂಟಿನ ಕಾರ್ಯಕರ್ತೆಯರಾದ ಸೌದ, ಝರೀನಾ, ನಫೀಸಾ, ಫೌಝಿಯಾ, ನಸೀಮಾ, ಸಫಿಯಾ, ಶರೀಫಾ, ಹೀಗೆ ಹಲವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್