janadhvani

Kannada Online News Paper

ಸ್ಪೋಟಕ ಬ್ರೇಕಿಂಗ್: ಹೋಟೆಲ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಸಂಸದ

ಮುಂಬೈ, ಫೆ. 22:ಲೋಕಸಭಾ ಸದಸ್ಯರೊಬ್ಬರು ಹೋಟೆಲ್ ಕೊಠಡಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ದಾದ್ರಾ ಮತ್ತು ನಗರ್ ಹವೇಲಿ ಕ್ಷೇತ್ರದ ಪಕ್ಷೇತರ ಸಂಸದ 58 ವರ್ಷದ ಮೋಹನ್ ದೇಲ್ಕರ್ ಸಾವಿಗೀಡಾದ ಸಂಸದರಾಗಿದ್ದಾರೆ.

ಇವರು ಮುಂಬೈನ ಹೈ ಎಂಡ್ ನ ಸೀ ಗ್ರೀನ್ ಹೋಟೆಲ್ನಲ್ಲಿ ತಂಗಿದ್ದ ವೇಳೆ ಸಾವಿಗೀಡಾಗಿದ್ದು, ಸ್ಥಳದಲ್ಲಿ ಡೆತ್ ನೋಟ್ ಕೂಡ ಸಿಕ್ಕಿದೆ. ಸಂಸದ ಮೋಹನ್ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದುಬಂದಿಲ್ಲ.

ಮೋಹನ್ ದೇಲ್ಕರ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಸಾವಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಮುಂಬೈ ಪೊಲೀಸರು ಇದರ ಹಿಂದಿನ ಕಾರಣ ಪತ್ತೆ ಹಚ್ಚಲು ತನಿಖೆ ನಡೆಸುತ್ತಿದ್ದಾರೆ.

error: Content is protected !! Not allowed copy content from janadhvani.com