ಎಸ್ಸೆಸ್ಸೆಫ್ ದ.ಕ ವೆಸ್ಟ್ ಜಿಲ್ಲಾ ಸಮಿತಿಯಿಂದ ಲೀಡ್ -21 ಕಾರ್ಯಾಗಾರವು ವೆಸ್ಟ್ ಜಿಲ್ಲಾಧ್ಯಕ್ಷರಾದ ಮುನೀರ್ ಅಹ್ಮದ್ ಸಖಾಫಿ ಉಳ್ಳಾಲರವರ ಅಧ್ಯಕ್ಷತೆಯಲ್ಲಿ ಗೂಡಿನಬಳಿಯ ಸಮುದಾಯದ ಭವನದಲ್ಲಿ ನಡೆಯಿತು.
ವೆಸ್ಟ್ ಜಿಲ್ಲಾ ಮೀಡಿಯಾ ಕಾರ್ಯದರ್ಶಿ ಝೈನುಲ್ ಆಬಿದ್ ನ ಈ ಮಿ ಕಟ್ಟತ್ತಿಲ ರವರು ದುಆ ಮೂಲಕ ಚಾಲನೆ ನೀಡಿದರು.ಜಿಲ್ಲಾ QD ಕಾರ್ಯದರ್ಶಿ ಇಬ್ರಾಹಿಂ ಅಹ್ಸನಿ ಮಂಜನಾಡಿ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ವಿವಿಧ ಹೊಣೆಗಾರಿಕೆಗಳ ಕಾರ್ಯಾಚರಣೆಯ ಬಗ್ಗೆ ವಿವರಿಸಿದರು. SYS ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ|MSM ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ ಉಸ್ತಾದ್ ನಾಯಕರಿಗಿರಬೇಕಾದ ಗುಣಗಳ ಬಗ್ಗೆ ತರಗತಿ ಮಂಡಿಸಿದರು. ರಾಜ್ಯ ಕಾರ್ಯದರ್ಶಿ ಹುಸೈನ್ ಸ ಅ ದಿ ಹೊಸ್ಮಾರ್ ಇಶಾರ ಚಂದಾಭಿಯಾನದ ಬಗ್ಗೆ ಡಿವಿಷನ್ ಹಾಗೂ ಸೆಕ್ಟರ್ ನಾಯಕರಿಗೆ ಮಾಹಿತಿ ಹಂಚಿದರು. ಸಭೆಯಲ್ಲಿ ಇಶಾರ ಅಭಿಯಾನದ ಪೋಸ್ಟರ್ ಪ್ರದರ್ಶನ ಮಾಡಲಾಯಿತು.
ಈ ಸಂದರ್ಭದಲ್ಲಿ KCF ನಾಯಕರಾದ ಆಸಿಫ್ ಹಾಜಿ ಗೂಡಿನಬಳಿ ಹಾಗೂ ಬಂಟ್ವಾಳ ಡಿವಿಷನ್ ಮಾಜಿ ನಾಯಕರಾದ ಹಂಝ ಮಂಚಿ ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೈದರಾಲಿ ಕಾಟಿಪಳ್ಳ ಸ್ವಾಗತಿಸಿ, ಜಿಲ್ಲಾ ರೈನ್ಬೋ ಕಾರ್ಯದರ್ಶಿ ಮನ್ಸೂರ್ ಬಜಾಲ್ ವಂದಿಸಿದರು. ಕಾರ್ಯಕ್ರಮವನ್ನು ಕ್ಯಾಂಪಸ್ ಕಾರ್ಯದರ್ಶಿ ಝುಹೈರ್ ಮಾಸ್ಟರ್ ಬಜ್ಪೆ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ