janadhvani

Kannada Online News Paper

ಏಳು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ನವದೆಹಲಿ, ಮಾ 30: ಭಾರತೀಯ ಹವಾಮಾನ ಇಲಾಖೆ ಮಾರ್ಚ್ 30ರಿಂದ ಏಪ್ರಿಲ್ 1ರ ನಡುವೆ ದೇಶದ ಏಳು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಇಂದಿನಿಂದ ಏಪ್ರಿಲ್ 1 ರ ವರೆಗೆ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಮಾರ್ಚ್ 30-31ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಬಂಗಾಳಕೊಲ್ಲಿಯಿಂದ ದಕ್ಷಿಣ ಪಶ್ಚಿಮ ದವರೆಗಿನ ಪ್ರಬಲ ಕೆಳಮಟ್ಟದ ಮಾರುತಗಳ ಪ್ರಭಾವದಿಂದ ಈಶಾನ್ಯ ರಾಜ್ಯಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಗಳಿದ್ದು, ಮಾರ್ಚ್ 30 ಮತ್ತು ಏಪ್ರಿಲ್ 2ರ ಅವಧಿಯಲ್ಲಿ ಈಶಾನ್ಯ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

error: Content is protected !! Not allowed copy content from janadhvani.com