ಮಂಗಳೂರು: ಕೊರೋನಾವೈರಸ್ ಎರಡನೇ ಅಲೆ ಪ್ರಭಾವದಿಂದ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜಿಲ್ಲೆಯಾದ್ಯಂತ ಸಿಆರ್‌ಪಿಸಿಯ ಸೆಕ್ಷನ್ 144 ಜಾರಿಗೊಳಿಸಿ ಆದೇಶಿಸಿದ್ದಾರೆ. ಅಲ್ಲದೆ ಎಲ್ಲಾ ಧಾರ್ಮಿಕ ಸಮಾರಂಭಗಳಿಗೆ ನಿಷೇಧ ಹೇರಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ (ಡಿಸಿ) ಡಾ.ರಾಜೇಂದ್ರ ಕೆ ವಿ ತಮ್ಮ ಮುಂದಿನ ಆದೇಶದವರೆಗೆ ನಿಷೇಧ ಜಾರಿಯಲ್ಲಿರುತ್ತದೆ.ಯುಗಾದಿ, ಹೋಳಿ, ಶಬ್ ಇ ಬರಾತ್, ಗುಡ್ ಫ್ರೈಡೆ ಇತ್ಯಾದಿ ಹಬ್ಬಗಳು ಅಥವಾ ಸಮಾರಂಭಗಳನ್ನು ನಿಷೇಧದ ಸಮಯದಲ್ಲಿ ಸಾರ್ವಜನಿಕ ಸ್ಥಳಗಳು, ಮೈದಾನಗಳು, ಉದ್ಯಾನಗಳು, ಮಾರುಕಟ್ಟೆಗಳು ಅಥವಾ ಧಾರ್ಮಿಕ ಪ್ರದೇಶಗಳಲ್ಲಿ ನಡೆಸಬಾರದು ಎಂದು ಅವರು ಹೇಳಿದ್ದಾರೆ.
ಜಾತ್ರೆಗಳು, ಮೆರವಣಿಗೆಗಳು, ಸಮಾವೇಶಗಳು, ಆಚರಣೆಗಳು ಮತ್ತು ಧಾರ್ಮಿಕ ಕಾರ್ಯಕ್ರಮಗಳಂತಹ ಜನರು ಸೇರುವ ಸ್ಥಳಗಳಲ್ಲಿ ವೈರಸ್ ಹರಡುವ ಸಾಧ್ಯತೆಗಳಿವೆ. ಆದ್ದರಿಂದ ಇಂತಹ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನುನಿಷೇಧಿಸಲಾಗಿದೆ. ಐದಕ್ಕಿಂತ ಹೆಚ್ಚು ಜನ ಒಂದೆಡೆ ಗುಂಪು ಸೇರುವಂತಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.