ನವದೆಹಲಿ, ಮಾ 30: ಕೋರೋನಾ ಲಸಿಕೆ ಕುರಿತು ಸಾಮಾಜಿಕ ಜಾಲ ತಾಣಗಳಲ್ಲಿ ಬರುವ ಸುದ್ದಿಗಳನ್ನು ನಂಬಬೇಡಿ. ಸಾಕಷ್ಟು ಊಹಾಪೋಹಗಳನ್ನು ಹರಡುತ್ತಿದ್ದು, ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಮತ್ತು ಕೋವಿಶಿಲ್ಡ್ ಲಸಿಕೆಗಳು ಅತ್ಯಂತ ಪರಿಣಾಮಕಾರಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಸಚಿವ ಡಾ. ಹರ್ಷವರ್ಧನ್ ಸ್ಪಷ್ಟಪಡಿಸಿದ್ದಾರೆ.
ದೆಹಲಿಯ ಹೃದಯ ಹಾಗೂ ಶ್ವಾಸಕೋಶ ಸಂಸ್ಥೆಯಲ್ಲಿ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಲಸಿಕೆ ಕುರಿತಂತೆ ಸಾಕಷ್ಟು ಜನರಲ್ಲಿ ಈಗಲೂ ಸಂಶಯಗಳಿವೆ.
ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ತಪ್ಪು ಮಾಹಿತಿಗಳನ್ನು ಜನತೆ ನಂಬಬಾರದು, ಭಾರತದಲ್ಲಿ ಲಭ್ಯವಿರುವ ಎರಡು ಲಸಿಕೆಗಳು ಅತ್ಯಂತ ಸುರಕ್ಷಿತ ಹಾಗೂ ಪರಿಣಾಮಕಾರಿ ಎಂದರು.