ಮಕ್ಕಾ: ರಂಜಾನ್ ಸಮಯದಲ್ಲಿ ಮಕ್ಕಾಗೆ ಆಗಮಿಸುವ ವಿಶ್ವಾಸಿಗಳನ್ನು ಸ್ವೀಕರಿಸಲು ಸಿದ್ಧತೆಗಳು ನಡೆಯುತ್ತಿವೆ. ಹರಮ್ ಮಸೀದಿಯಲ್ಲಿ ಪ್ರಾರ್ಥನೆ ಮತ್ತು ಉಮ್ರಾಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಜಿದ್ದಾದ ಕಿಂಗ್ ಅಬ್ದುಲ್ ಅಝೀಝ್ ವಿಮಾನ ನಿಲ್ದಾಣವೂ ವಿಶ್ವಾಸಿಗಳನ್ನು ಸ್ವೀಕರಿಸಲು ಸಿದ್ಧವಾಗಿದೆ.
ರಂಜಾನ್‌ನಲ್ಲಿ ಪ್ರತಿ ದಿನ ಅರ್ಧ ಲಕ್ಷ ಜನರಿಗೆ ಉಮ್ರಾ ಮತ್ತು ಒಂದು ಲಕ್ಷ ಮಂದಿಗೆ ಪ್ರಾರ್ಥನೆ ಮಾಡಲು ಅವಕಾಶ ನೀಡುವಂತೆ ಮಕ್ಕಾದ ಮಸೀದಿ ಅಲ್-ಹರಮ್‌ನಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ. ರಂಜಾನ್ ಸಮಯದಲ್ಲಿ ಮಕ್ಕಾದ ಹರಮ್ ಮಸೀದಿಯಲ್ಲಿ ವಿಶ್ವಾಸಿಗಳ ಸೇವೆಗಾಗಿ ಪುರುಷರು ಮತ್ತು ಮಹಿಳೆಯರು ಸೇರಿದಂತೆ ಸುಮಾರು 4,500 ತರಬೇತಿ ಪಡೆದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
COVID-19 ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಬಿಗಿಗೊಳಿಸಲಾಗಿದೆ. ಉಮ್ರಾ ನಿರ್ವಹಿಸಲು ಅಥವಾ ಗ್ರ್ಯಾಂಡ್ ಮಸೀದಿಯಲ್ಲಿ ಪ್ರಾರ್ಥನೆಗಳಿಗೆ ಹಾಜರಾಗಲು COVID-19 ವಿರುದ್ಧ ಲಸಿಕೆಯನ್ನು ಪಡೆದಿರುವುದು ಕಡ್ಡಾಯ.
ತ್ವವಾಫ್ ಪ್ರದರ್ಶನಕ್ಕಾಗಿ 14 ಸಾಲುಗಳಿವೆ.ಕಅ್ ಬಾದ ಸಮೀಪದ ಮೊದಲ ಮೂರು ಸಾಲುಗಳು ವೃದ್ಧರು, ದುರ್ಬಲರು ಮತ್ತು ಅಂಗವಿಕಲರಿಗಾಗಿ ಸೀಮಿತ. ತ್ವವಾಫ್ ಮತ್ತು ಇತರ ಆಚರಣೆಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ವಿಮಾನ ನಿಲ್ದಾಣಕ್ಕೆ ಬರುವ ಯಾತ್ರಾರ್ಥಿಗಳಿಗೆ ಸೇವೆ ಸಲ್ಲಿಸಲು ನಾಗರಿಕ ವಿಮಾನಯಾನ ಪ್ರಾಧಿಕಾರದ ಅಡಿಯಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಜಿದ್ದಾದ ಕಿಂಗ್ ಅಬ್ದುಲ್ ಅಝೀಝ್ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ನಾರ್ತ್ ಟರ್ಮಿನಲ್ ನಲ್ಲಿ ಯಾತ್ರಿಕರನ್ನು ಸ್ವೀಕರಿಸಲು ಮತ್ತು ಮರಳಲು ವ್ಯವಸ್ಥೆ ಮಾಡಲಾಗುತ್ತಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ