ನವದೆಹಲಿ: ಪವಿತ್ರ ಕುರ್’ಆನ್ ಇದರ 26 ಸೂಕ್ತಗಳನ್ನು ರದ್ದುಗೊಳಿಸಬೇಕು ಎಂದು ಮಾರ್ಚ್ 11ರಂದು ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿ ಇದರ ಮಾಜಿ ಅಧ್ಯಕ್ಷ ವಸೀಮ್ ರಿಝ್ವೀ ರವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದಲ್ಲದೇ ಅರ್ಜಿದಾರನಿಗೆ 50,000 ರೂಪಾಯಿ ದಂಡವನ್ನೂ ವಿಧಿಸಿದೆ.
ಕುರ್’ಆನ್ ನಲ್ಲಿ ಕೆಲವು ಸೂಕ್ತಗಳು ದೇಶದ ಸಾರ್ವಭೌಮತ್ವ ಹಾಗೂ ಏಕತೆಗೆ ಅಪಾಯಕಾರಿಯಾಗಿದೆ ಆದ್ದರಿಂದ ಆ ಸೂಕ್ತಗಳನ್ನು ರದ್ದುಗೊಳಿಸಬೇಕು ಎಂದು ರಿಝ್ವೀಯವರ ಅರ್ಜಿಯಲ್ಲಿ ಉಲ್ಲೇಖಿಸಿಸಲಾಗಿತ್ತು. ಇದು ಸಂಪೂರ್ಣವಾಗಿ ಕ್ಷುಲ್ಲಕ ಅರ್ಜಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಇದನ್ನು ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಆರ್.ಎಫ್. ನಾರಿಮನ್, ಬಿ.ಆರ್. ಗವಾಯಿ ಮತ್ತು ಹೃಷಿಕೇಶ್ ರಾಯ್ ಅವರನ್ನೊಳಗೊಂಡ ಪೀಠವು ಅರ್ಜಿಯನ್ನು ತಿರಸ್ಕರಿಸಿದೆ. ರಿಝ್ವೀ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಹಲವಾರು ಮುಸ್ಲಿಂ ಸಂಘಟನೆಗಳು ಮತ್ತು ಉಲಮಾ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ