janadhvani

Kannada Online News Paper

ಕುರ್’ಆನಿನ ಸೂಕ್ತಗಳನ್ನು ರದ್ದುಗೊಳಿಸಲು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಪವಿತ್ರ ಕುರ್’ಆನ್ ಇದರ 26 ಸೂಕ್ತಗಳನ್ನು ರದ್ದುಗೊಳಿಸಬೇಕು ಎಂದು ಮಾರ್ಚ್ 11ರಂದು ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿ ಇದರ ಮಾಜಿ ಅಧ್ಯಕ್ಷ ವಸೀಮ್ ರಿಝ್ವೀ ರವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದಲ್ಲದೇ ಅರ್ಜಿದಾರನಿಗೆ 50,000 ರೂಪಾಯಿ ದಂಡವನ್ನೂ ವಿಧಿಸಿದೆ.

ಕುರ್’ಆನ್ ನಲ್ಲಿ ಕೆಲವು ಸೂಕ್ತಗಳು ದೇಶದ ಸಾರ್ವಭೌಮತ್ವ ಹಾಗೂ ಏಕತೆಗೆ ಅಪಾಯಕಾರಿಯಾಗಿದೆ ಆದ್ದರಿಂದ ಆ ಸೂಕ್ತಗಳನ್ನು ರದ್ದುಗೊಳಿಸಬೇಕು ಎಂದು ರಿಝ್ವೀಯವರ ಅರ್ಜಿಯಲ್ಲಿ ಉಲ್ಲೇಖಿಸಿಸಲಾಗಿತ್ತು. ಇದು ಸಂಪೂರ್ಣವಾಗಿ ಕ್ಷುಲ್ಲಕ ಅರ್ಜಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಇದನ್ನು ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಆರ್‌.ಎಫ್‌. ನಾರಿಮನ್‌‌, ಬಿ.ಆರ್‌. ಗವಾಯಿ ಮತ್ತು ಹೃಷಿಕೇಶ್‌ ರಾಯ್‌ ಅವರನ್ನೊಳಗೊಂಡ ಪೀಠವು ಅರ್ಜಿಯನ್ನು ತಿರಸ್ಕರಿಸಿದೆ. ರಿಝ್ವೀ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಹಲವಾರು ಮುಸ್ಲಿಂ ಸಂಘಟನೆಗಳು ಮತ್ತು ಉಲಮಾ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು.

error: Content is protected !! Not allowed copy content from janadhvani.com