ಬೆಂಗಳೂರು: ‘ಆನ್‌ಲೈನ್‌ನಲ್ಲಿ ಪರೀಕ್ಷೆಗಳನ್ನು ನಡೆಸುವಂತೆ ವಿದ್ಯಾರ್ಥಿಗಳು, ಪೋಷಕರು ಬೇಡಿಕೆ ಇಡುತ್ತಿದ್ದಾರೆ. ನಮ್ಮ ವ್ಯವಸ್ಥೆಯಲ್ಲಿ ಅದು ಸಾಧ್ಯವಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.
ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ಉನ್ನತ ಶಿಕ್ಷಣ ವ್ಯಾಪ್ತಿಯ ಕಾಲೇಜುಗಳಲ್ಲಿ ಎಲ್ಲ ಪರೀಕ್ಷೆಗಳು ಆಫ್‌ಲೈನ್‌ನಲ್ಲಿ (ಕಾಲೇಜುಗಳಲ್ಲಿ) ನಡೆಯುತ್ತದೆ. ಕೆಲವು ಡೀಮ್ಡ್ ವಿಶ್ವವಿದ್ಯಾಲಯಗಳು ಆನ್‌ಲೈನ್‌ನಲ್ಲಿ ಪರೀಕ್ಷೆ ಮಾಡಿಕೊಳ್ಳುತ್ತಿವೆ. ನಮ್ಮಲ್ಲಿ ಇದಕ್ಕೆ ಅವಕಾಶವಿಲ್ಲ’ ಎಂದರು.
ಸದ್ಯಕ್ಕೆ ಬಸ್ ಮುಷ್ಕರದಿಂದ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ಎಂಜಿನಿಯರಿಂಗ್ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಕೊಂಚ ವ್ಯತ್ಯಯವಾಗಿದೆ. ಮುಷ್ಕರ ನಿಂತ ಕೂಡಲೇ ಪರೀಕ್ಷೆಗಳು ಆರಂಭವಾವಾಗುತ್ತವೆ’ ಎಂದರು.
‘ಮುಂದಿನ ಶೈಕ್ಷಣಿಕ ವರ್ಷದಲ್ಲಿ (2021-22) ಮೊದಲು ಆನ್ ಲೈನ್ ತರಗತಿಗಳನ್ನು ಆರಂಭ ಮಾಡಲಾಗುವುದು. ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದ ಮೇಲೆ ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಆಫ್‌ಲೈನ್ ಅಥವಾ ಆಣ್‌ಲೈನ್ ತರಗತಿ ಆಯ್ಕೆ ಮಾಡಿಕೊಳ್ಳಬಹದು. ಆದರೆ, ಎರಡರಲ್ಲಿ ಯಾವುದಾದರೂ ಒಂದರಲ್ಲಿ ಹಾಜರಾತಿ ಕಡ್ಡಾಯ’ ಎಂದು ಅವರು ಪುನರುಚ್ಚರಿಸಿದರು.
















ಇನ್ನಷ್ಟು ಸುದ್ದಿಗಳು
ನಾಳೆಯಿಂದ ಎಸ್ಸೆಸ್ಸೆಫ್ ಕ್ಯಾಂಪಸ್ ಕಾನ್ಫರೆನ್ಸ್ – ಎಲ್ಲರ ಚಿತ್ತ ಮೈಸೂರಿನತ್ತ!
ನಂದಾವರ ಕೋಟೆ: ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಬಾಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ
ಶಾಜ್ಮಿಯ ಡಿಸ್ಟಿಂಕ್ಷನ್ (557) ಅಂಕದೊಂದಿಗೆ ತೇರ್ಗಡೆ
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ. 73.40 ವಿದ್ಯಾರ್ಥಿಗಳು ಉತ್ತೀರ್ಣ- ಬಾಲಕಿಯರೇ ಮೇಲುಗೈ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ್ವಿತೀಯ ಪಿಯುಸಿ ಫಲಿತಾಂಶ: 542 ಅಂಕಗಳಿಸಿ ಕಳಂಜಿಬೈಲ್ ಗೆ ಕೀರ್ತಿ ತಂದ ಶಝ್ಮಿಯಾ
ಪಿಯುಸಿ ಕೆಜಿಎನ್ ಶೀ ಕ್ಯಾಂಪಸ್ ಗೆ 100%
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಕಾವೂರು BGS ಫ್ರೌಡಶಾಲೆಯ ವಿದ್ಯಾರ್ಥಿನಿ ಮರಿಯಮ್ ಸಲ್ವಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ