janadhvani

Kannada Online News Paper

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

ಮುಂದಿನ ಮೂರು ದಿನಗಳಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ನಾಳೆ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಮಳೆ ಬರುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿರುತ್ತದೆ.