ಮಂಗಳೂರು: ಇಲ್ಲಿನ ಬಜಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಧ್ಯರಾತ್ರಿ ಲ್ಯಾಂಡ್ ಆಗಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಹವಾಮಾನ ವೈಪರೀತ್ಯದ ಕಾರಣದಿಂದ ಕೊಚ್ಚಿಯಲ್ಲಿ ಇಳಿಯಿತು. ಇದರಿಂದ ಪ್ರಯಾಣಿಕರು ಪರದಾಟ ನಡೆಸಬೇಕಾದ ಪ್ರಸಂಗ ಎದುರಾಯಿತು.
ದುಬೈನಿಂದ ಮಂಗಳೂರಿಗೆ 118 ಪ್ರಯಾಣಿಕರನ್ನು ಹೊತ್ತು ಏರ್ ಇಂಡಿಯಾ 1XE 384 ವಿಮಾನ ಹೊರಟಿತ್ತು. ಮಧ್ಯರಾತ್ರಿ 12:30 ಕ್ಕೆ ಸಮಯದಲ್ಲಿ ಬಜಪೆ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಆದರೆ ಮಂಗಳೂರಿನಲ್ಲಿ ಸಿಡಿಲು ಮಳೆಯಾಗುತ್ತಿದ್ದ ಕಾರಣ ಲ್ಯಾಂಡ್ ಮಾಡಲಾಗದೆ ಕೊಚ್ಚಿಗೆ ತೆರಳಿತ್ತು.
ತಡರಾತ್ರಿ ಏಕಾಏಕಿ ಕೊಚ್ಚಿಯಲ್ಲಿ ಲ್ಯಾಂಡ್ ನಿಂದ ಪ್ರಯಾಣಿಕರು ಪರದಾಟ ನಡೆಸುವಂತಾಯಿತು. ಅರ್ಧಗಂಟೆಯಲ್ಲಿ ಪುನ: ಮಂಗಳೂರಿಗೆ ತೆರಳುವುದೆಂದು ಸಿಬ್ಬಂದಿಗಳು ಪ್ರಯಾಣಿಕರನ್ನು ವಿಮಾನದಲ್ಲಿ ಕುಳ್ಳಿರಿಸಿದ್ದರು. ಆದರೆ ಮುಂಜಾನೆಯಾದರೂ ಮಂಗಳೂರಿಗೆ ಪ್ರಯಾಣ ಬೆಳಸದೇ ಪ್ರಯಾಣಿಕರು ಸಂಕಷ್ಟ ಅನುಭವಿಸಿದರು.
ರಾತ್ರಿಯಿಡೀ ಊಟ ನಿದ್ದೆಯಿಲ್ಲದೇ ಪ್ರಯಾಣಿಕರು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸಮಯ ಕಳೆಯಬೇಕಾದ ಪರಿಸ್ಥಿತಿ ಎದುರಾಗಿತ್ತು. ಇಂದು ಮತ್ತೆ ಕೊಚ್ಚಿಯಿಂದ ಮಂಗಳೂರಿಗೆ ವಿಮಾನ ಬಂದಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ