ಬೆಂಗಳೂರು,ಏ.17: ಸೋಂಕು ಹೆಚ್ಚಳದ ಹಿನ್ನಲೆ ಇನ್ಮುಂದೆ ರಾಜ್ಯದಲ್ಲಿ ಯಾವುದೇ ಜಾತ್ರೆ ನಡೆಯಬಾರದು. ಜಾತ್ರೆಗಳು ನಡೆದರೆ ಆಯಾ ಡಿಸಿಗಳೇ ಹೊಣೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಅವರು ಇಂದು ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಅವರು, ಸೋಂಕು ಹೆಚ್ಚಳ ಹಿನ್ನಲೆ ಯಾವುದೇ ಕಾರಣಕ್ಕೂ ಜಾತ್ರೆಗಳಿಗೆ ಅವಕಾಶವಿಲ್ಲ.
ಒಂದು ವೇಳೆ ಅವಕಾಶ ಕೊಟ್ಟರೆ ಡಿಸಿ,ಎಸ್ಪಿ ಡಿಸ್ಮಿಸ್ ಮಾಡುತ್ತೇವೆ ಎಂದು ಎಚ್ಚರಿಸಿದರು. ಜನಸಂದಣಿತಯಾಗದಂತೆ ಎಲ್ಲಾ ರೀತಿಯ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಲಾಗಿದೆ. ಇನ್ಮುಂದೆ ಮದುವೆ ಸಮಾರಂಭಗಳಿಗೆ ಪಾಸ್ ಕಡ್ಡಾಯವಾಗಿದೆ. ಒಳಾಂಗಣದಲ್ಲಿ 100 ಜನರಿಗೆ ಅವಕಾಶವಿದ್ದು, ಹೊರಾಂಗಣದಲ್ಲಿ 200 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಮದುವೆಗೆ ಮುನ್ನ ಸಮೀಪದ ಠಾಣೆಯಲ್ಲಿ ಪಾಸ್ ಪಡೆಯಬೇಕು ಎಂದು ತಿಳಿಸಿದರು.
ಈಗಾಗಲೇ ಬುಕ್ ಆಗಿರುವ ಮದುವೆಗಳಿಗೆ ಪಾಸ್ ನಿಯಮ ಅನ್ವಯವಿಲ್ಲ. ಇನ್ಮುಂದೆ ಬುಕ್ ಆಗೋ ಮದುವೆಗಳಿಗೆ ಪಾಸ್ ಕಡ್ಡಾಯವಾಗಿದೆ. ಹೊಸದಾಗಿ ನಡೆಯುವುದಕ್ಕೆ ಪಾಸ್ ಅಗತ್ಯ. ರಾಜಕೀಯ ಸಭೆ,ಸಮಾರಂಭಗಳಿಗೂ ಇದು ಅನ್ವಯ. ರಾಜ್ಯದಲ್ಲಿ ಎಲ್ಲಿಯೂ ಆಕ್ಸಿಜನ್ ಸಮಸ್ಯೆ ಆಗಬಾರದು. ಯಾವುದೇ ಕಾರಣಕ್ಕೂ ಕೋವಿಡ್ ಸೋಂಕಿರಿಗೆ ಬೆಡ್ ಕೊರತೆ ಆಗಬಾರದು.ಎಲ್ಲಾಕಡೆ ಈಗಿನಿಂದಲೇ ಬೆಡ್ ವ್ಯವಸ್ಥೆ ಆಗಬೇಕು. ಕೊವೀಡ್ ನಿರ್ವಹಣೆಗೆ ಡಿಸಿಗಳು ಕೇಳಿದ್ದ ಹಣ ಬಿಡುಗಡೆ ಮಾಡಲಾಗುವುದು. ಕೊವೀಡ್ ನಿಂದ ಮೃತಪಟ್ಟವರ ನ್ನು ಗೌರವ ಯುತವಾಗಿ ಅಂತ್ಯಸಂಸ್ಕಾರ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾ ಡಿಸಿಗಳೊಂದಿಗೆ ಇಂದು ಚರ್ಚೆ ನಡೆಸಿದ್ದು, ಬೆಂಗಳೂರಿಗೆ ಸಂಬಂಧಿಸಿ ಸೋಮವಾರ ಸಭೆ ನಡೆಸಲಾಗುವುದು. ರಾಜಧಾನಿಯಲ್ಲಿ ಸೋಂಕು ಹೆಚ್ಚಳ ಸಂಬಂಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದಕ್ಕೂ ಮುನ್ನ ಶಾಸಕರು, ಸಂಸದರ ಜತೆ ಚರ್ಚಿಸಿ ಕಠಿಣಕ್ರಮ ಜಾರಿ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಯಿ ತಿಳಿಸಿದರು.
ಎಪ್ರಿಲ್ 20ರವರೆಗೆ ರಾಜಧಾನಿ ಸೇರಿದಂತೆ 7 ಜಿಲ್ಲೆಗಳ ಪ್ರಮುಖ ನಗರಗಳಲ್ಲಿ ಮಾತ್ರ ಕರ್ಫ್ಯೂ ಇದೆ. ಏಪ್ರಿಲ್ 20ರ ಬಳಿಕ ಮತ್ತಷ್ಟು ಬಿಗಿ ಕ್ರಮ ಮಾಡುವ ವಿಚಾರ ನಡೆಸಲಾಗಿದೆ. ಸದ್ಯಕ್ಕೆ ಇಂದು ಸಭೆ ಮಾಡಿ, ಇಷ್ಟು ಕ್ರಮ ಮಾಡಿದ್ದೇವೆ. ಸಿಎಂ ಬಿಎಸ್ವೈ ಗುಣಮುಖರಾದ ನಂತರ ಮತ್ತೆ ಸಭೆ ನಡೆಸಿ, ಅವಾಗ ಮತ್ತಷ್ಟು ಬಿಗಿ ಕ್ರಮ ಮಾಡುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಗೃಹ ಸಚಿವರು ತಿಳಿಸಿದರು.
ಸೋಂಕಿನ ತೀವ್ರತೆ ಗಮನಿಸಿದರೆ ಕಳೆದ ಬಾರಿ ಕೇಸ್ ಗಿಂತ ಈ ಬಾರಿ ಹೆಚ್ಚು ಆಗಬಹುದು. ಬೇರೆ ದೇಶಗಳಲ್ಲಿ ಮೂರನೇ ಅಲೆ ಕಾಣಿಸಿಕೊಂಡಿದೆ. ಹೀಗಾಗಿ ನಾವು ಆ ಹಂತಕ್ಕೆ ಗೆ ಹೋಗಬಾರದು. ವಾರ್ ಪುಟಿಂಗ್ ಮಾದರಿಯಲ್ಲಿ ಕ್ರಮಜರುಗಿಸುತ್ತೇವೆ. ಎರಡನೇ ಅಲೆಯನ್ನ ನಿಯಂತ್ರಿಸಬೇಕು ಅದಕ್ಕೆ ಯಾವುದೇ ಸಮಸ್ಯೆ ಆಗಬಾರದು. ಡೇಟಾ ಎಂಟ್ರಿ ಸಮಸ್ಯೆ ಆಗಬಾರದು. ಸಿಬ್ಬಂದಿಗಳಿಗೆ ವೇತನ ಸಮಸ್ಯೆ ಆಗಬಾರದು. ಕೇಳಿ ದಷ್ಟು ಹಣ ನೀಡುತ್ತೇವೆ. ಕೋವಿಡ್ ರೋಗಿಗಳ ಶವ ಸಂಸ್ಕಾರ ಗೌರವಯುತವಾಗಿ ನಡೆಯಬೇಕು ಎಂದರು.
ಆರೋಗ್ಯ ಸಚಿವ ಸುಧಾಕರ್ ಮಾತನಾಡಿ, ಸಿಎಂ ಬೇಗ ಗುಣಮುಖರಾಗಿ ಹೊರಬರುತ್ತಾರೆ. ಬಳಿಕ ಬೆಂಗಳೂರು ಶಾಸಕರ ಜೊತೆ ಸಭೆ ಮಾಡಬೇಕು. ನಂತರ ಪ್ರತ್ಯೇಕ ಮಾರ್ಗಸೂಚಿ ತೆಗೆದುಕೊಳ್ಳುತ್ತೇವೆ. ಬೆಂಗಳೂರಿನಲ್ಲಿ ಎಂಟು ವಲಯಮಾಡಿದ್ದೇವೆ. ಅಲ್ಲಿ ನೋಡಲ್ ಆಫೀಸರ್ ನೇಮಕ ಮಾಡಿದ್ದೇವೆ. ಎಲ್ಲಿಯೂ ಬೆಡ್ ಸಮಸ್ಯೆ ಎದುರಾಗಿಲ್ಲ. ಅಂತಹ ಆಸ್ಪತ್ರೆಗಳಿದ್ದರೆ ಇಲ್ಲಿ ತಿಳಿಸುವಂತೆ ಹೇಳಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ