ಬೆಂಗಳೂರು: ದೇಶದಲ್ಲಿ ಕೊರೋನ ಎರಡನೇ ಅಲೆಯು ವ್ಯಾಪಿಸುತ್ತಿದ್ದು,ಸಾರ್ವಜನಿಕರು ಕೋವಿಡ್ ಸಂಬಂಧಿತ ಮುಂಜಾಗರೂಕತಾ ಕ್ರಮಗಳನ್ನೆಲ್ಲಾ ಅಳವಡಿಸಿಕೊಂಡು ಮುನ್ನೆಚ್ಚರಿಕೆ ವಹಿಸುವುದು ಹಾಗೂ ಸರ್ಕಾರದ ಆದೇಶಗಳನ್ನು ಪಾಲಿಸಬೇಕೆಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಕರೆ ನೀಡಿದ್ದಾರೆ.
ಶಾಲಾ ಕಾಲೇಜುಗಳನ್ನು ಸಂಪೂರ್ಣ ಬಂದ್ ಮಾಡಿ ರಾಜ್ಯ ಸರಕಾರವು ಆದೇಶ ಹೊರಡಿಸಿರುವುದರಿಂದ ವಿದ್ಯಾರ್ಥಿಗಳು ಅನಗತ್ಯ ಸುತ್ತಾಟ ನಡೆಸದೇ, ಮನೆಯೊಳಗೆ ಇದ್ದು ಅಧ್ಯಯನ ನಿರತರಾಗಬೇಕೆಂದು ಪ್ರಕಟನೆಯಲ್ಲಿ ಅವರು ಸಲಹೆ ನೀಡಿದ್ದಾರೆ.
ಎಸ್ಸೆಸ್ಸೆಲ್ಸಿ, ದ್ವಿತಿಯ ಪಿಯುಸಿ ಮುಂತಾದ ಪರೀಕ್ಷೆಗಳನ್ನು ಎದುರಿಸಲಿರುವ ವಿದ್ಯಾರ್ಥಿಗಳು ಈ ರಜಾವಧಿಯನ್ನು ಸದುಪಯೋಗ ಪಡಿಸಬೇಕೆಂದೂ ರಮಝಾನ್ ಆರಾಧನೆಗೆ ಸಂಬಂಧಿಸಿ ವಿದ್ವಾಂಸರು ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸ ಅದಿ ಶಿವಮೊಗ್ಗ ಹಾಗೂ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪತ್ರಿಕಾಪ್ರಕಟನೆಯಲ್ಲಿ ತಿಳಿಸಿದ್ದಾರೆ.