ಮಂಗಳೂರು: ರಾಜ್ಯ ಸರ್ಕಾರದಿಂದ ಹೊಸ ಕೋವಿಡ್ ಗೈಡ್ ಲೈನ್ಸ್ ಪ್ರಕಟ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮತ್ತು ಕಮಿಷನರ್ ಶಶಿಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಸರಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದ್ದಾರೆ.
ವೀಕೆಂಡ್ ಕರ್ಫ್ಯೂ ಸಮಯದಲ್ಲಿ ನಿಗದಿಯಾಗಿದ್ದ ಮದುವೆ ನಡೆಸಲು ಅನುಮತಿ ಇದ್ದು, ಆದರೆ ಕೇವಲ 50 ಜನರು ಮಾತ್ರ ಮದುವೆಯಲ್ಲಿ ಭಾಗವಹಿಸಲು ಅವಕಾಶವಿದೆ. ಇದಕ್ಕಾಗಿ ಮದುವೆ ಮನೆಯವರು 50 ಜನರ ಪಟ್ಟಿ ತಯಾರಿಸಬೇಕು ಆ ಪಟ್ಟಿಯನ್ನು ಸ್ಥಳೀಯಾಡಳಿತಕ್ಕೆ ತೋರಿಸಿ ಅಪ್ರೂವ್ ಮಾಡಿಸಿಕೊಳ್ಳಬೇಕು ಎಂದರು.
ಆ ಬಳಿಕ ಆ 50 ಜನರ ಅನುಮತಿ ಪಡೆದ ಪತ್ರ ಮತ್ತು ಮದುವೆ ಆಮಂತ್ರಣ ಪತ್ರಿಕೆ ಹಾಗೂ ಮದುವೆಗೆ ಹೋಗುವವರ ಐಡಿ ಕಾರ್ಡ್ ಕಡ್ಡಾಯವಾಗಿದ್ದು, ಈ ಮೂರು ದಾಖಲೆಗಳನ್ನು ವಾಟ್ಸ್ ಅಪ್ ನಲ್ಲಿ ಪೊಲೀಸರಿಗೆ ತೋರಿಸಿ ಪ್ರಯಾಣಿಸಬಹುದು ಆದರೆ ಮದುವೆ ಆಮಂತ್ರಣ ಪತ್ರಿಕೆಯ ನೈಜ ಪ್ರತಿ ಪ್ರಯಾಣದ ವೇಳೆ ಕೈಯ್ಯಲ್ಲಿರಲೇ ಬೇಕು ಮದುವೆಗೆ ಗೆಸ್ಟ್ ಲಿಸ್ಟ್ ನಲ್ಲಿರುವವರ ಐಡಿ ತೋರಿಸಿದರಷ್ಟೇ ಪ್ರಯಾಣಕ್ಕೆ ಅವಕಾಶ ಲಭಿಸಲಿದ್ದು, ಇನ್ನು ಮದುವೆಗೆ ಹೋಗುವ ಕಾರಿನಲ್ಲಿ ಏಳೆಂಟು ಜನರನ್ನು ತುಂಬಿದ್ರೆ ಪ್ರಯಾಣಿಸಲು ಅವಕಾಶ ಇಲ್ಲ ಎಂದರು.
ದೇವಸ್ಥಾನದಲ್ಲಿ ಮದುವೆ ನಡೆಯುವುದಾದರೆ 50 ಜನರನ್ನು ಸೇರಿಸಿ ಮಾಡಬಹುದು ಈಗಾಗಲೇ ಮಾಡಿದ ನಿಯಮದಂತೆ ದೇವಸ್ಥಾನಗಳಲ್ಲಿ ಮದುವೆಗೆ ಅನುಮತಿ ಇದ್ದು, ಮದುವೆ ಫೋಟೋಗ್ರಾಫರ್ಸ್, ಅರ್ಚಕರು ಎಲ್ಲರೂ 50 ಜನರ ಲಿಸ್ಟ್ ನಲ್ಲೇ ಬರುತ್ತಾರೆ.
ದೇವಸ್ಥಾನದ ಧಾರ್ಮಿಕ ಕಾರ್ಯಗಳನ್ನು ಅರ್ಚಕರು ಸೇರಿಕೊಂಡು ಮಾಡಬೇಕು ಆದರೆ ಯಾವುದೇ ಸಾರ್ವಜನಿಕರು ಈ ಆಚರಣೆಯಲ್ಲಿ ಭಾಗಿಯಾಗಲು ನಿಷೇಧವಿದೆ ಈ ಆದೇಶ ಇವತ್ತಿನಿಂದಲೇ ಜಿಲ್ಲೆಯ ಎಲ್ಲಾ ದೇವಸ್ಥಾನಗಳಲ್ಲಿ ಜಾರಿಯಾಗಲಿದೆ ಎಂದರು.
ಅವಶ್ಯಕತೆ ಪಾಸ್ ಮತ್ತು ಐಡಿ ಕಾರ್ಡ್ ಬಳಸಿ ಕುಟುಂಬದ ಜೊತೆ ಸಂಚರಿಸಲು ಅವಕಾಶವಿಲ್ಲ ಯಾರ ಹೆಸರಿನಲ್ಲಿ ಪಾಸ್ ಮತ್ತು ಐಡಿ ಕಾರ್ಡ್ ಇದೆ, ಅವರಿಗಷ್ಟೇ ಸಂಚಾರಕ್ಕೆ ಅವಕಾಶ ಇದೆ ಎಂದರು.
ವೀಕೆಂಡ್ ಕರ್ಫ್ಯೂ ಸಮಯದಲ್ಲಿ ಬೆಳಿಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಇದ್ದು, ಅದರೆ ಈ ವಸ್ತು ಖರೀದಿ ಅವರ ಮನೆಯ ಅಕ್ಕಪಕ್ಕದಲ್ಲೇ ಖರೀದಿಸಬೇಕು ವಾಹನ ಬಳಸಿ ಅಗತ್ಯ ವಸ್ತು ಖರೀದಿಗೆ ಹೋಗೋದಾದರೂ ಅದಕ್ಕೆ ಸೂಕ್ತ ಕಾರಣ ಬೇಕು ಅದನ್ನು ದುರುಪಯೋಗ ಪಡಿಸಿಕೊಂಡರೆ ಅಂಥವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ