ರಿಯಾದ್ : ಸೌದಿ ಅರೇಬಿಯಾದಲ್ಲಿ, ವಿಮಾನ ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್ ನೀಡಲು ತವಕ್ಕಲ್ನಾ ಆ್ಯಪ್ ನ್ನು ಕಡ್ಡಾಯಗೊಳಿಸಲಾಗಿದೆ. ದೇಶೀಯ ಮತ್ತು ಅಂತರರಾಷ್ಟ್ರೀಯ ಸೇವೆಗಳನ್ನು ನಿರ್ವಹಿಸುವ ವಿಮಾನಯಾನ ಸಂಸ್ಥೆಗಳಿಗೆ ಸೌದಿ ನಾಗರಿಕ ವಿಮಾನಯಾನ ಪ್ರಾಧಿಕಾರ ಹೊಸ ನಿರ್ದೇಶನವನ್ನು ನೀಡಿದೆ.
ಕೋವಿಡ್ ಹರಡುವಿಕೆಯ ವಿರುದ್ಧ ಮುನ್ನೆಚ್ಚರಿಕೆ ಕ್ರಮಗಳನ್ನು ಬಲಪಡಿಸುವ ಪ್ರಯತ್ನಗಳ ಒಂದು ಭಾಗವಾಗಿದೆ ಇದು. ವ್ಯಕ್ತಿಯ ಆರೋಗ್ಯ ಸ್ಥಿತಿಯನ್ನು ನಿರ್ದಿಷ್ಟಪಡಿಸುವ ತವಕ್ಕಲ್ನಾ ಆ್ಯಪ್ನಲ್ಲಿ ಕೋವಿಡ್ ನೆಗೆಟಿವ್ ಅಥವಾ ಇಮ್ಯೂನ್ ಆಗಿದ್ದರೆ ಮಾತ್ರ ಬೋರ್ಡಿಂಗ್ ಪಾಸ್ ಅನುಮತಿಸಲಾಗುತ್ತದೆ. ಈ ಕಾನೂನು ನಿನ್ನೆ ಜಾರಿಗೆ ಬಂದಿದೆ ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ.
ತವಕ್ಕಲ್ನಾದಲ್ಲಿ ಪ್ರಯಾಣಿಕರ ಸ್ಥಿತಿ ಕೋವಿಡ್ ಪೀಡಿತ ಅಥವಾ ಅನುಮಾನಾಸ್ಪದ ಸ್ಥಿತಿಯಲ್ಲಿದ್ದರೆ, ಪ್ರಯಾಣವನ್ನು ಮುಂದೂಡಬೇಕು ಅಥವಾ ಟಿಕೆಟ್ ಕಾಯ್ದಿರಿಸುವಿಕೆಯನ್ನು ರದ್ದುಗೊಳಿಸಬೇಕು ಅಥವಾ ಬದಲಾಯಿಸಬೇಕು ಎಂದು ಪ್ರಾಧಿಕಾರ ಹೇಳಿದೆ.
ಕೋವಿಡ್ ವಿಸ್ತರಣೆಯ ತಡೆಗಟ್ಟುವಿಕೆಯ ಭಾಗವಾಗಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ವಿಶೇಷ ತಪಾಸಣೆ ಪ್ರಾರಂಭಿಸುವುದರ ಜೊತೆಗೆ, ತವಕ್ಕಲ್ನಾ ಆ್ಯಪ್ ಸ್ಥಿತಿ ಪರಿಶೀಲನೆಯನ್ನು ಸಹ ಕಡ್ಡಾಯಗೊಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ