ನೇಪಾಳದ ಮೂಲಕ ಪ್ರಯಾಣಿಸುವ ವಿದೇಶಿಯರಿಗೆ ಕೋವಿಡ್ ಪಿಸಿಆರ್ ಪರೀಕ್ಷೆಯನ್ನು ಸ್ಥಗಿತಗೊಳಿಸುವಂತೆ ಪ್ರಯೋಗಾಲಯಗಳಿಗೆ ನೇಪಾಳದ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ.ಹೊಸ ನಿಯಂತ್ರಣ ನಿನ್ನೆ ಸಂಜೆ ಜಾರಿಗೆ ಬಂದಿದೆ.
ಈ ನಿರ್ಧಾರವು ನೇಪಾಳ ಮೂಲಕ ಸೌದಿ ಅರೇಬಿಯಾಕ್ಕೆ ಪ್ರಯಾಣಿಸುವ ವಲಸಿಗರಿಗೆ ಹಿನ್ನಡೆಯಾಗಲಿದೆ. ಏತನ್ಮಧ್ಯೆ, ಶಾರ್ಜಾ ಇಮಿಗ್ರೇಷನ್ ಭಾರತದಿಂದ ಬರುವವರಿಗೆ ಸಂದರ್ಶಕ ವೀಸಾ ನೀಡುವುದನ್ನು ಸ್ಥಗಿತಗೊಳಿಸಿದೆ. ಆದರೆ ದುಬೈ ಸೇರಿದಂತೆ ಇತರ ಎಮಿರೇಟ್ಗಳಲ್ಲಿ ವೀಸಾ ಪಡೆಯಲು ಯಾವುದೇ ಅಡೆತಡೆಗಳಿಲ್ಲ.
ಅದೇ ಸಮಯದಲ್ಲಿ, ನಾಲ್ಕು ಕೊಲ್ಲಿ ರಾಷ್ಟ್ರಗಳು ಭಾರತದ ಮೇಲೆ ನಿರ್ಬಂಧಗಳನ್ನು ವಿಧಿಸಿದ್ದರಿಂದ ಸಾವಿರಾರು ಜನರು ವಲಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾರತದಲ್ಲಿ ಕೋವಿಡ್ ಹರಡುವಿಕೆಯು ನಿಯಂತ್ರಣಕ್ಕೆ ಬರದೇ ಇರುವುದರಿಂದ ನಿಷೇಧವು ಅನಿರ್ದಿಷ್ಟವಾಗಿ ಮುಂದುವರಿಯುತ್ತದೆ ಎಂಬ ಕಳವಳವೂ ಹೆಚ್ಚಾಗಿದೆ.
ಇತ್ತೀಚಿನ ದಿನಗಳಲ್ಲಿ ಯುಎಇ, ಕುವೈತ್ ಮತ್ತು ಒಮಾನ್ ಭಾರತದಿಂದ ಬರುವ ವಿಮಾನಗಳ ಮೇಲೆ ಸಂಪೂರ್ಣ ನಿಷೇಧ ಹೇರಿವೆ. ಇದರೊಂದಿಗೆ ದೇಶದಲ್ಲಿ ರಜೆಯಲ್ಲಿದ್ದ ಸಾವಿರಾರು ವಲಸಿಗರು ಸಿಲುಕಿದ್ದಾರೆ. ನಿಷೇಧ ತೆರವುಗೊಂಡು ಮರಳುವಿಕೆ ಸಾಧ್ಯವಾಗುವುದು ಯಾವಾಗ ಎಂಬ ಆತಂಕವು ವಲಸಿಗ ಭಾರತೀಯರಲ್ಲಿ ಮನೆಮಾಡಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ