ಜಿನೀವಾ | ಕೋವಿಡ್-19 2ನೇ ಅಲೆಯಿಂದಾಗಿ ತತ್ತರಿಸಿ ಹೋಗಿರುವ ಭಾರತದಲ್ಲಿನ ಪರಿಸ್ಥಿತಿ ಹೃದಯ ವಿದ್ರಾವಕತೆಯನ್ನು ಮೀರಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಡಾನೊಮ್ ಗೇಬ್ರಿಯಾಸ್, ಈ ಸಂಕಷ್ಟದ ಪರಿಸ್ಥಿಯಿಲ್ಲಿ ಭಾರತಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು ಎಂದು ಹೇಳಿದರು.
ಸಾವಿರಾರು ಆಮ್ಲಜನಕ ಸಾಂದ್ರಕಗಳು, ಪೂರ್ವನಿರ್ಮಿತ ಮೊಬೈಲ್ ಕ್ಷೇತ್ರ ಆಸ್ಪತ್ರೆಗಳು ಮತ್ತು ಪ್ರಯೋಗಾಲಯ ಸರಬರಾಜುಗಳನ್ನು ಭಾರತಕ್ಕೆ ತಲುಪಿಸಲಾಗುವುದು.
“ಭಾರತದಲ್ಲಿ 2,600 ಕ್ಕೂ ಹೆಚ್ಚು WHO ತಜ್ಞರನ್ನು ನಿಯೋಜಿಸಲಾಗಿದೆ” ಎಂದು ಅವರು ಹೇಳಿದರು. ಭಾರತದಲ್ಲಿ ಸತತ ಐದನೇ ದಿನವೂ ಮೂರು ಲಕ್ಷಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿವೆ.