ನವದೆಹಲಿ: ಕೊರೋನಾವನ್ನು ನಿಯಂತ್ರಿಸುವ ಸಲುವಾಗಿ ಎಲ್ಲಾ ರಾಜ್ಯಗಳು ಕಳೆದ ಒಂದು ತಿಂಗಳಿನಿಂದ ಲಾಕ್ಡೌನ್ ಹೇರಿವೆ. ಹೀಗಾಗಿ ಭಾರತದಲ್ಲಿ ಸೋಮವಾರದಿಂದ ಹೊಸ ಕೊರೋನಾ ವೈರಸ್ ಪ್ರಕರಣಗಳು ಕುಸಿತವಾಗಿದೆ ಎಂದು ವರದಿಯಾಗಿತ್ತು. ಈ ವರದಿ ಅನೇಕರಲ್ಲಿ ಆಶಾವಾದಕ್ಕೆ ಕಾರಣವಾಗಿತ್ತು. ಆದರೆ, ಈ ವರದಿಯನ್ನು ಅಲ್ಲಗೆಳೆದಿರುವ ವಿಶ್ವ ಆರೋಗ್ಯ ಸಂಸ್ಥೆ (WHO), “ಭಾರತದ ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ವೈರಸ್ ಅತ್ಯಂತ ವೇಗವಾಗಿ ಹರಡುತ್ತಿದೆ. ಆದರೆ, ಈ ಭಾಗದಲ್ಲಿ ವ್ಯಾಪಕ ಕೊರೋನಾ ಪರೀಕ್ಷೆಗಳು ನಡೆಯುತ್ತಿಲ್ಲ. ಹೀಗಾಗಿ ಈ ಅಂಕಿಅಂಶಗಳು ವಿಶ್ವಾಸಾರ್ಹವಲ್ಲ” ಎಂದು ವಿಶ್ವ ಆರೋಗ್ಯ ಸಂಸ್ಥೆಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ವೈರಸ್ನ ಹೊಸ ರೂಪಾಂತರವು ಸೋಂಕಿನ ಉಲ್ಬಣಕ್ಕೆ ಕಾರಣವಾಗಿದ್ದರಿಂದ, ಕಳೆದ ತಿಂಗಳಿನಿಂದ ಪ್ರತಿದಿನ 4 ಲಕ್ಷಕ್ಕಿಂತಲೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ಸೋಂಕಿತರ ಪ್ರಮಾಣ ಕುಸಿತ ಕಂಡರೂ ಸಹ, ಈ ಬಗ್ಗೆ ಖಚಿತತೆಯಿಲ್ಲ ಎಂದು ತಜ್ಞರು ಹೇಳಿದ್ದಾರೆ. ಜೊತೆಗೆ ಭಾರತದಲ್ಲಿ ಪತ್ತೆಯಾಗಿರುವ ಬಿ.1.617 ವೈರಸ್ ವಿಶ್ವದಾದ್ಯಂತ ಕಳವಳಕ್ಕೆ ಕಾರಣವಾಗಿದೆ.
“ದೇಶದ ಅನೇಕ ಭಾಗಗಳಲ್ಲಿ ಕೊರೋನಾ ಸೋಂಕು ಇನ್ನೂ ಉತ್ತುಂಗಕ್ಕೇರಿಲ್ಲ, ಅವು ಭವಿಷ್ಯದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ” ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಎಚ್ಚರಿಸಿದ್ದಾರೆ ಎಂದು ‘ದಿ ಹಿಂದೂ’ ಪತ್ರಿಕೆ ವರದಿ ಮಾಡಿದೆ.
“ಅತಿ ಹೆಚ್ಚು ರಾಷ್ಟ್ರೀಯ ಪಾಸಿಟಿವ್ ದರ ಶೇ.20 ಆಗಿದ್ದರೂ, ಇದಕ್ಕಿಂತಲೂ ಕೆಟ್ಟ ಪರಿಸ್ಥಿತಿ ಎದುರಾಗುವ ಸಾಧ್ಯತೆಯಿದೆ. ಹೆಚ್ಚಿನ ರಾಜ್ಯಗಳಲ್ಲಿ ಪರೀಕ್ಷೆ ಇನ್ನೂ ಅಸಮರ್ಪಕವಾಗಿದೆ. ಹೆಚ್ಚುತ್ತಿರುವ ಕೊರೋನಾ ಪಾಸಿಟಿವ್ ದರವನ್ನು ನೋಡಿದಾಗ ನಾವು ಸಾಕಷ್ಟು ಪರೀಕ್ಷಿಸುತ್ತಿಲ್ಲ ಎಂಬುದು ಸ್ಪಷ್ಟವಾಗುತ್ತದೆ” ಎಂದು ಸ್ವಾಮಿನಾಥನ್ ಹೇಳಿದ್ದಾರೆ.
ಕಳೆದ ತಿಂಗಳಿನಿಂದ ತೀವ್ರವಾಗಿ ಏರುತ್ತಲೆ ಇದ್ದ ಕೊರೋನಾ ಸೋಂಕು ಕಳೆದ 24 ಗಂಟೆಗಳಲ್ಲಿ ಇಳಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ಹೇಳಿದೆ. ಕಳೆದ ಒಂದು ದಿನದಲ್ಲಿ ಹೊಸ ಕೊರೋನಾ ಪಾಸಿಟಿವ್ ಪ್ರಕರಣ 281,386 ಇಳಿದೆ. ಏಪ್ರಿಲ್ 21 ರ ನಂತರ ಇದೇ ಮೊದಲ ಬಾರಿಗೆ 3 ಲಕ್ಷಕ್ಕಿಂಲೂ ಕಡಿಮೆ ಪ್ರಕರಣ ವರದಿಯಾಗಿದೆ. ದೇಶದಲ್ಲಿ ದೈನಂದಿನ ಸಾವುಗಳು 4,000 ಕ್ಕಿಂತ ಹೆಚ್ಚಿವೆ ಎಂದು ವರದಿಯಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ