ಉಡುಪಿ: ಲಾಕ್ಡೌನ್ನಿಂದ ಆರ್ಥಿಕ ಸಂಕಷ್ಟಕ್ಕೊಳಗಾಗಿ ಹಲವು ವಿದ್ಯಾರ್ಥಿಗಳು ಕಾಲೇಜು ಫೀಸು ಪಾವತಿ ಮಾಡಲು ಸಮಯಾವಕಾಶ ನೀಡಲು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಕಾರ್ಕಳ ಯೂನಿಟ್ ಮತ್ತು ಹೊನ್ನಾಳ ಯೂನಿಟ್ ವತಿಯಿಂದ ಕಾರ್ಕಳ ಕ್ಷೇತ್ರ ಶಿಕ್ಷಣ ಅಧಿಕಾರಿ ಮತ್ತು ಬ್ರಹ್ಮಾವರ ಕ್ಷೇತ್ರ ಶಿಕ್ಷಣ ಅಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಲಾಕ್ಡೌನ್ನಲ್ಲಿ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ಪ್ರಾರಂಭಿಸಲಾಗಿದ್ದು, ಆದರೆ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಹಲವಾರು ವಿದ್ಯಾರ್ಥಿಗಳು ಕಾಲೇಜು ಶುಲ್ಕ ಪಾವತಿ ಮಾಡದಿರುವ ಕಾರಣ ಆನ್ಲೈನ್ ತರಗತಿಗೆ ಸೇರಿಸದೆ ವಿದ್ಯಾರ್ಥಿಗಳಿಗೆ ಒತ್ತಡ ಏರುತ್ತಿದೆ. ಇದರಿಂದ ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯದ ಬಗ್ಗೆ ಆತಂಕಕ್ಕೊಳಗಾಗಿದ್ದಾರೆ. ಹಾಗಾಗಿ ಇಲ್ಲಿನ ಆಡಳಿತ ವ್ಯವಸ್ಥೆ ಇದರ ಬಗ್ಗೆ ಗಮನಹರಿಸಿ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಕಾರ್ಕಳ ಯೂನಿಟ್ ಅಧ್ಯಕ್ಷರಾದ ಇಮ್ರಾನ್ ಮತ್ತು ಸದಸ್ಯರಾದ ವಾಸಿಫ್ ಮತ್ತು ಹೊನ್ನಾಳ ಯೂನಿಟ್ ಅಧ್ಯಕ್ಷರಾದ ನೌಫಾಲ್ ಮತ್ತು ಕಾರ್ಯದರ್ಶಿ ಶಾಝ್ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ