ಬೆಂಗಳೂರು,ಜೂ.10: ರಾಜ್ಯದ 8 ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕೊರೊನಾ ಇಳಿಕೆಯಾಗುತ್ತಿಲ್ಲ. ಹೀಗಾಗಿ ಆ 8 ಜಿಲ್ಲೆಗಳಲ್ಲಿ ಒಂದು ವಾರ ಲಾಕ್‌ಡೌನ್ ಮುಂದುವರೆಸಲು ಸಿಎಂ ಬಿಎಸ್ ಯಡಿಯೂರಪ್ಪ ಸೂಚಿಸಿದ್ದಾರೆ. ರಾಜ್ಯದಲ್ಲಿ ಜೂನ್ 14ರ ಬಳಿಕ ಅನ್ಲಾಕ್ ಆದರೂ ಆ 8 ಜಿಲ್ಲೆಗಳಲ್ಲಿ ಲಾಕ್ಡೌನ್ ಇರಲಿದೆ. ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ಮಂಡ್ಯ, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು ಡಿಸಿಗಳ ಜೊತೆ ಸಭೆ ನಡೆಸಿದ ಸಿಎಂ ಬಿಎಸ್ ಯಡಿಯೂರಪ್ಪ 8 ಜಿಲ್ಲೆಗಳಲ್ಲಿ ಕೊರೊನಾ ಹೆಚ್ಚಳಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ.
ಇಂದು ಜಿಲ್ಲಾಡಳಿತಗಳ ಡಿಸಿಗಳ ಜೊತೆ ನಡೆಸಿದ ಸಭೆಯಲ್ಲಿ ಸಿಎಂ ಬಿಎಸ್‌ವೈ ಕಳವಳಗೊಂಡಿದ್ದಾರೆ. ರಾಜ್ಯದ 8 ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕೊರೊನಾ ಇಳಿಕೆಯಾಗುತ್ತಿಲ್ಲ. ಹೀಗಾಗಿ ಆ 8 ಜಿಲ್ಲೆಗಳಲ್ಲಿ ಒಂದು ವಾರ ಲಾಕ್‌ಡೌನ್ ಮುಂದುವರೆಸಲು ಸೂಚಿಸಿದ್ದಾರೆ. ಆ ಜಿಲ್ಲೆಗಳಲ್ಲಿ ಜನರು ಕೊವಿಡ್ ನಿಯಮ ಉಲ್ಲಂಘಿಸದಂತೆ ಕ್ರಮಕೈಗೊಳ್ಳಿ. ಈ ಹಿಂದೆ 8 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಸಲು ಹೇಳಿದ್ದೀರಿ. ಅದರಂತೆ ಸೋಂಕು ಕಡಿಮೆಯಾಗದ ಕಾರಣ ಒಂದು ವಾರ ಲಾಕ್ಡೌನ್ ಮುಂದುವರಿಸೋಣ ಆದ್ರೆ ಲಾಕ್‌ಡೌನ್ ಜತೆಗೆ ಏನು ವಿನಾಯಿತಿ ನೀಡಬೇಕಾಗಿದೆ. ಈ ಬಗ್ಗೆ ನೀವೇ ಚರ್ಚೆ ಮಾಡಿ ತಿಳಿಸಿ ಎಂದು ಸಿಎಂ ಬಿಎಸ್ವೈ ಆದೇಶಿಸಿದ್ದಾರೆ.
ಡಿಸಿ, ಉಸ್ತುವಾರಿ ಸಚಿವರಿಗೆ ಜವಾಬ್ದಾರಿ
ನೀವು ಹೇಳಿದಂತೆ ಲಾಕ್‌ಡೌನ್ ವಿಸ್ತರಣೆ ಮಾಡೋಣ. ಆದರೆ ಹೇಗೆ ಮಾಡಬೇಕೆಂದು ಚರ್ಚೆ ಮಾಡಿ. ಎಲ್ಲವನ್ನೂ ನಾವು ಇಲ್ಲಿಂದ ಕುಳಿತು ಹೇಳಲು ಆಗಲ್ಲ. ಜಿಲ್ಲೆಗಳಲ್ಲಿಯೇ ನೀವು ಚರ್ಚೆ ಮಾಡಿ ಮಾಹಿತಿ ತಿಳಿಸಿ. ಪಾಸಿಟಿವಿಟಿ ಕಡಿಮೆ ಮಾಡಲು ಕ್ರಮವಹಿಸಿ ಎಂದು ಡಿಸಿ, ಉಸ್ತುವಾರಿ ಸಚಿವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಜವಾಬ್ದಾರಿ ನೀಡಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ತೀವ್ರತೆ ಕಡಿಮೆಯಾಗುತ್ತಿದೆ. ಆದರೆ ಈ ಎಂಟು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಇಳಿಕೆ ಆಗುತ್ತಿಲ್ಲ. ಮೈಸೂರು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚು ಇರುವುದು ಕಳವಳಕ್ಕೆ ಕಾರಿಣವಾಗಿದೆ.
















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ