ರಿಯಾದ್: ಕೋವಿಡ್ ಸನ್ನಿವೇಶದಲ್ಲಿ, ವಿದೇಶಿ ಯಾತ್ರಿಕರಿಗೆ ಈ ಬಾರಿಯೂ ಹಜ್ ನಿರ್ವಹಿಸಲು ಅವಕಾಶವಿಲ್ಲ.ಸೌದಿ ಅರೇಬಿಯಾದ ಹಜ್ ಮತ್ತು ಉಮ್ರಾ ಸಚಿವಾಲಯ ಈ ಸಂಬಂಧ ಪ್ರಕಟನೆ ನೀಡಿರುವುದಾಗಿ ಸೌದಿ ಪ್ರಸ್ ಏಜೆನ್ಸಿ ವರದಿ ಮಾಡಿದೆ.
ಸೌದಿ ಅರೇಬಿಯಾದಲ್ಲಿ ವಾಸಿಸುವ ವಿದೇಶಿಯರು ಮತ್ತು ದೇಶೀಯ ಪ್ರಜೆಗಳಿಗೆ ಮಾತ್ರ ಹಜ್ ನಿರ್ವಹಿಸಲು ಅವಕಾಶವಿದೆ. ಈ ಬಾರಿ 60,000 ಜನರಿಗೆ ಮಾತ್ರ ಹಜ್ ಮಾಡಲು ಅವಕಾಶವಿದೆ.ಕಳೆದ ವರ್ಷವೂ ಕೊರೊನಾ ಕಾರಣದಿಂದ ಹಜ್ ಯಾತ್ರೆಯಲ್ಲಿ ಅತ್ಯಲ್ಪ ಮಂದಿಗೆ ಭಾಗಿಯಾಗಲು ಅವಕಾಶ ನೀಡಲಾಗಿತ್ತು.
ಈ ಹಿಂದೆ ಕೇಂದ್ರ ಹಜ್ ಮಂತ್ರಿ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಹಜ್ ವಿಚಾರದಲ್ಲಿ ಸೌದಿ ನಿರ್ಧಾರವನ್ನು ಸ್ವೀಕರಿಸುವುದಾಗಿ ಹೇಳಿದ್ದರು. “ಎರಡೂ ದೇಶಗಳ ಜನರ ಆರೋಗ್ಯವು ಅತ್ಯಂತ ಮಹತ್ವದ್ದಾಗಿದೆ” ಎಂದು ಅವರು ಹೇಳಿದರು.
ಈ ವರ್ಷದ ಜುಲೈ ಮಧ್ಯಭಾಗದಲ್ಲಿ ಆರಂಭವಾಗಲಿರುವ ಹಜ್ ಯಾತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡಿರುವ 18ರಿಂದ 65 ವರ್ಷದೊಳಗಿನವರು ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್