ಕೋವಿಡ್ ಹಿನ್ನೆಲೆಯಲ್ಲಿ ವಿವಿಧ ದೇಶಗಳಲ್ಲಿ ಸಿಲುಕಿರುವ ವಲಸಿಗರಿಗೆ ಸೌದಿ ಸರ್ಕಾರ ಸೌದಿ ಅರೇಬಿಯಾಕ್ಕೆ ಮರಳುವ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ. ಇದರ ಭಾಗವಾಗಿದೆ ಇಕಾಮಾ, ಮರು ಪ್ರವೇಶ ವಿಸಾ ಹಾಗೂ ಭೇಟಿ ವೀಸಾಗಳ ಉಚಿತ ನವೀಕರಣ. ತಿಂಗಳುಗಟ್ಟಲೆ ಸೌದಿ ಅರೇಬಿಯಾಕ್ಕೆ ಮರಳಲು ಸಾಧ್ಯವಾಗದೆ ಆತಂಕದಲ್ಲಿದ್ದ ವಲಸಿಗರಿಗೆ ಸೌದಿ ದೊರೆಯ ದಯೆಯಿಂದ ಆಶಾದಾಯಕ ಮನೋಭಾವ ಉಂಟಾಗಿದೆ.
ಇದಲ್ಲದೆ, ವಿದೇಶದಲ್ಲಿ ಲಸಿಕೆ ಪಡೆದವರಿಗೆ ಸಾಂಸ್ಥಿಕ ಸಂಪರ್ಕತಡೆಯಿಂದ ವಿನಾಯಿತಿ ನೀಡಲಾಗುತ್ತದೆ. ತವಕ್ಕಲ್ನಾ ಆ್ಯಪ್‌ನಲ್ಲೂ ತಮ್ಮ ವ್ಯಾಕ್ಸಿನೇಷನ್ ಮಾಹಿತಿಯನ್ನು ನವೀಕರಿಸಲು ಸೌದಿ ಅರೇಬಿಯಾ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಇದಲ್ಲದೆ, ಸೌದಿ ಅರೇಬಿಯಾಕ್ಕೆ ಬರುವ ವಲಸಿಗರಿಗೆ ಹೆಚ್ಚಿನ ಅನುಕೂಲವಾಗುವಂತೆ ಭಾರತ ಸೇರಿದಂತೆ 75 ದೇಶಗಳಲ್ಲಿ ತವಕಲ್ನಾ ಆ್ಯಪ್ ನ್ನು ಸಕ್ರಿಯ ಗೊಳಿಸಲಾಗಿದೆ.
ಏತನ್ಮಧ್ಯೆ, ಸೌದಿ ಅರೇಬಿಯಾಕ್ಕೆ ಬರುವ ಎಲ್ಲಾ ವಿದೇಶಿಯರು ನಿರ್ಗಮಿಸುವ 72 ಗಂಟೆಗಳ ಒಳಗೆ ಮುಕೀಮ್ ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬೇಕು. ಈ ನಿಯಮ ಜುಲೈ 16 ರಿಂದ ಜಾರಿಗೆ ಬರಲಿದೆ. ಇಖಾಮಾ ಹೊಂದಿರುವವರು, ಸಂದರ್ಶಕ ವಿಸಾದವರು, ಲಸಿಕೆ ಹಾಕಿದ ಮತ್ತು ಲಸಿಕೆ ಹಾಕದವರು ನೋಂದಣಿಯನ್ನು ಪೂರ್ಣಗೊಳಿಸಬೇಕು.
ಇದು ಸೌದಿ ವಿಮಾನ ನಿಲ್ದಾಣಗಳಿಗೆ ಆಗಮಿಸುವ ವಿದೇಶಿಯರಿಗೆ ತಮ್ಮ ಕಾರ್ಯವಿಧಾನಗಳನ್ನು ಪೂರ್ಣಗೊಳಿಸಲು ಮತ್ತು ವಲಸಿಗರಿಗೆ ಯಾವುದೇ ಆತಂಕವಿಲ್ಲದೆ ಪ್ರಯಾಣಿಸಲು ಸುಲಭವಾಗಲಿದೆ.
ಅದೇ ಸಮಯದಲ್ಲಿ, ವಿಮಾನಯಾನ ಬಿಕ್ಕಟ್ಟು ಮತ್ತು ಭಾರತದಿಂದ ಕೊವಾಕ್ಸಿನ್ ತೆಗೆದುಕೊಂಡವರ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ವಲಸಿಗರು ಭರವಸೆ ಹೊಂದಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ