ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲೆ(ವೆಸ್ಟ್) ವತಿಯಿಂದ “Career Plus” ಶಿಕ್ಷಣ ಹಾಗೂ ಉದ್ಯೋಗ ಮಾರ್ಗದರ್ಶಿ ಕಾರ್ಯಾಗಾರ ಜೂನ್ 13ರಂದು ಝೂಂ ಹಾಗೂ ಯುಟ್ಯೂಬ್ ಮೂಲಕ,ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲೆ ವೆಸ್ಟ್ ಅಧ್ಯಕ್ಷರಾದ ಮುನೀರ್ ಅಹ್ಮದ್ ಕಾಮಿಲ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಎಸ್ಸೆಸ್ಸೆಫ್ ದ.ಕ ಜಿಲ್ಲೆ ವೆಸ್ಟ್ ಮೀಡಿಯಾ ಕನ್ವೀನರ್ ಸಿದ್ದೀಕ್ ಬಜ್ಪೆ ಸ್ವಾಗತಿಸಿ,ಎಸ್ಸೆಸ್ಸೆಫ್ ರಾಜ್ಯ ವಿಸ್ಡಂ ವಿಭಾಗದ ಕಾರ್ಯದರ್ಶಿ ಎನ್.ಸಿ ರಹೀಂ ಹೊಸ್ಮಾರ್ ಉದ್ಘಾಟಿಸಿದರು.ಸಂಪನ್ಮೂಲ ವ್ಯಕ್ತಿಗಳಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸಂಶೋಧನಾ ವಿಭಾಗದ ಪ್ರಾಚಾರ್ಯರಾದ ಶಹೀನ್ ಅಲಿ ಎಸ್.ಬಿ ಹಾಗೂ ನಾಸಿರ್ ಮಾಸ್ಟರ್ ಬಜ್ಪೆ ಶಿಕ್ಷಣ ಹಾಗೂ ಉದ್ಯೋಗ ಮಾರ್ಗದರ್ಶಿ ಬಗ್ಗೆ ತರಗತಿ ಮಂಡಿಸಿದರು.
ಮುಖ್ಯ ಅತಿಥಿಗಳಾಗಿ ಎಸ್ಸೆಸ್ಸೆಫ್ ದ.ಕ ಜಿಲ್ಲೆ ವೆಸ್ಟ್ ಪ್ರ.ಕಾರ್ಯದರ್ಶಿ ಹೈದರ್ ಅಲಿ ಕಾಟಿಪಳ್ಳ ಹಾಗೂ ವಿಸ್ಡಂ ಕಾರ್ಯದರ್ಶಿ ಸುಹೈಲ್ 10ನೇ ಮೈಲು ಉಪಸ್ಥಿತರಿದ್ದರು.ಎಸ್ಸೆಸ್ಸೆಫ್ ದ.ಕ ಜಿಲ್ಲೆ ವೆಸ್ಟ್ ಕ್ಯಾಂಪಸ್ ಕಾರ್ಯದರ್ಶಿ ಝುಹೈರ್ ಮಾಸ್ಟರ್ ಬಜ್ಪೆ ನಿರೂಪಿಸಿದರು.






