janadhvani

Kannada Online News Paper

ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯಿಂದ “ಇನ್ಫೋಪಾತ್” ಕಾರ್ಯಾಗಾರ

ಬೆಂಗಳೂರು, ಜೂ 15: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಪೋಲಿಸ್ ಇಲಾಖೆಯ ನೇಮಕಾತಿ ಪ್ರಕ್ರಿಯೆ, ಪರೀಕ್ಷೆ ವಿಧಾನ ಇತ್ಯಾದಿ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೂ ಯುವಕರಿಗೆ ನೀಡುವ ಸಲುವಾಗಿ “ಇನ್ಫೋಪಾತ್” ಮಾಹಿತಿ ಕಾರ್ಯಾಗಾರ ರಾಜ್ಯಾಧ್ಯಕ್ಷರಾದ ಅಬ್ದುಲ್ ಲತೀಫ್ ಸ‌ಅದಿಯವರ ಅಧ್ಯಕ್ಷತೆಯಲ್ಲಿ ದಿನಾಂಕ 16/06/2021 ರಂದು ಮಧ್ಯಾಹ್ನ 03:00 ಗಂಟೆಗೆ ಝೂಮ್ ಅಪ್ಲಿಕೇಶನ್ ಮೂಲಕ ಆನ್ಲೈನ್ನಲ್ಲಿ ನಡೆಯಲಿದೆ.

ಪ್ರಸ್ತುತ ಈ ಕಾರ್ಯಾಗಾರವನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಉದ್ಘಾಟಿಸಲಿದ್ದು, ಮೂಡುಬಿದಿರೆ ಠಾಣೆಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ಝೈದ್ ರವರು ತರಗತಿ ನೀಡಲಿದ್ದಾರೆ, ರಾಜ್ಯ ವಿಸ್ಡಮ್ ವಿಭಾಗದ ಕಾರ್ಯದರ್ಶಿ ಎನ್.ಸಿ ರಹೀಮ್ ರವರು ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ ಎಂದು ರಾಜ್ಯ ಸಮಿತಿ ಮಾದ್ಯಮ ಕಾರ್ಯದರ್ಶಿ ನವಾಝ್ ಭಟ್ಕಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.