ಬೋಳಂತೂರು: ಕೇಂದ್ರ ಸರಕಾರವು ಪೆಟ್ರೋಲ್ ಹಾಗೂ ಡೀಸೆಲ್ ನಿರಂತರ ಬೆಲೆ ಏರಿಸುವ ಮೂಲಕ ಕೊರೋನಾ ಸಂಧಿಗ್ದ ಪರಿಸ್ಥಿತಿಯಲ್ಲೂ ಜನಸಾಮಾನ್ಯರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ. ಇದರ ವಿರುದ್ದ ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೋಳಂತೂರು ಗ್ರಾಮ ಸಮಿತಿ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗಿಯಾದ ಕಾರ್ಯಕರ್ತರು ಕೇಂದ್ರ ಸರಕಾರದ ಜನವಿರೋಧಿ ನೀತಿಗಳ ವಿರುದ್ದ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೋಳಂತೂರು ಗ್ರಾಮ ಸಮಿತಿ ಅಧ್ಯಕ್ಷರಾದ ಮುಹಮ್ಮದ್ ಬಿ , ಪ್ರಧಾನ ಕಾರ್ಯದರ್ಶಿ ನವಾಝ್ , ಬೋಳಂತೂರು ಗ್ರಾಮ ಪಂಚಾಯತ್ ಸದಸ್ಯರಾದ ಶಾಹುಲ್ ಹಮೀದ್ ಮತ್ತು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.