ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆಯೂ ಹಲವು ಗೊಂದಲಗಳು ವಿದ್ಯಾರ್ಥಿಗಳು, ಪೋಷಕರಲ್ಲಿ ಮನೆ ಮಾಡಿತ್ತು. ಇದಕ್ಕೆ ತೆರೆ ಎಳೆದಿರುವ ರಾಜ್ಯ ಶಿಕ್ಷಣ ಇಲಾಖೆ ಜುಲೈ ಕೊನೆಯ ವಾರದಲ್ಲಿ SSLC ಪರೀಕ್ಷೆ ನಡೆಯೋದು ಬಹುತೇಕ ಫಿಕ್ಸ್ ಎಂದಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಯ ಎಲ್ಲಾ ಮಾದರಿ ಪ್ರಶ್ನೆ ಪತ್ರಿಕೆಯನ್ನು ಶಿಕ್ಷಣ ಇಲಾಖೆ ರಿಲೀಸ್ ಮಾಡಿದೆ. ಮಾದರಿ ಪ್ರಶ್ನೆಪತ್ರಿಕೆಯೂ ವೆಬ್ ಸೈಟ್ ನಲ್ಲಿ ಬಿಡುಗಡೆಗೊಂಡಿದೆ.
ಎರಡು ದಿನದ ಹಿಂದೆ ಕೋರ್ ಸಬ್ಜೆಕ್ಟ್ ನ ಮಾದರಿ ಪ್ರಶ್ನೆ ಪತ್ರಿಕೆ ರಿಲಿಸ್ ಆಗಿತ್ತು. ಇದೀಗ ಭಾಷಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಯೂ ಸಹ ಬಿಡುಗಡೆಯಾಗಿದೆ. ಅದರಂತೆ ಇದೀಗ ಎಲ್ಲಾ ಭಾಷಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ ರಿಲೀಸ್ ಆಗಿದೆ. ಮಾದರಿ ಪ್ರಶ್ನೆಪತ್ರಿಕೆ ಶಿಕ್ಷಣ ಇಲಾಖೆಯ ವೆಬ್ ಸೈಟ್ www.sslc.karnataka.gov.in ನಲ್ಲಿ ಪ್ರಕಟಗೊಂಡಿದೆ.
ಪ್ರಥಮ ಭಾಷೆ ಕನ್ನಡ, ಪ್ರಥಮ ಭಾಷೆ ಉರ್ದು, ಪ್ರಥಮ ಭಾಷೆ ಇಂಗ್ಲಿಷ್, ಪ್ರಥಮ ಭಾಷೆ ಸಂಸ್ಕೃತ ಪತ್ರಿಕೆ ಬಿಡುಗಡೆಯಾಗಿದೆ. ದ್ವಿತೀಯ ಭಾಷೆ ಇಂಗ್ಲಿಷ್, ದ್ವಿತೀಯ ಭಾಷೆ ಕನ್ನಡ ಹಾಗೂ ತೃತೀಯ ಭಾಷೆ ಹಿಂದಿ, ತೃತೀಯ ಭಾಷೆ ಇಂಗ್ಲಿಷ್ ನ ಮಾದರಿ ಪ್ರಶ್ನೆ ಪತ್ರಿಕೆ ರಿಲೀಸ್ ಮಾಡಲಾಗಿದೆ. ತಲಾ 40 ಅಂಕಗಳ ಒಟ್ಟು 120 ಅಂಕದ ಪ್ರಶ್ನೆಪತ್ರಿಕೆಳಿಗೆ ಮೂರು ಗಂಟೆಗಳ ಕಾಲ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಎಲ್ಲ ಪ್ರಶ್ನೆಗಳು ಬಹುಆಯ್ಕೆ ಆಗಿದ್ದು, ಉತ್ತರಗಳನ್ನು ಓ ಎಂ ಆರ್ ಶೀಟ್ ನಲ್ಲಿ ನಮೂದಿಸಬೇಕು. OMR ಶೀಟ್ ಮಾದರಿಯೂ ಪ್ರಕಟಗೊಂಡಿದ್ದು, ಈ ತಿಂಗಳ ಕೊನೆಯ ವಾರದಲ್ಲಿ ಘೋಷಣೆ ಸಾಧ್ಯತೆ ಇದೆ.