ಬೆಂಗಳೂರು: ರಾಜ್ಯಾದ್ಯಂತ ಸೋಮವಾರದಿಂದ ಅನ್ಲಾಕ್ 2.0 ನಿಮಯಗಳು ಜಾರಿಗೆ ಬರಲಿವೆ. ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ 16 ಜಿಲ್ಲೆಗಳಲ್ಲಿ ಲಾಕ್ಡೌನ್ನ್ನು ದೊಡ್ಡ ಮಟ್ಟಕ್ಕೆ ಸಡಿಲ ಮಾಡಲಾಗಿದೆ. ಶೇ. 5 ರಿಂದ ಶೇ. 10 ರಷ್ಟು ಪಾಸಿಟಿವಿಟಿ ದರ ಇರುವ 13 ಜಿಲ್ಲೆಗಳಲ್ಲಿ ಅನ್ಲಾಕ್ 1.0 ನಿಯಮಗಳು ಅನ್ವಯವಾಗಲಿವೆ. ಆದರೆ ಶೇ. 10ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಮೈಸೂರಿನಲ್ಲಿ ಕಠಿಣ ನಿಯಮಗಳು ಮುಂದುವರಿಯಲಿವೆ.
ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗೆ ತಾಂತ್ರಿಕ ಸಲಹಾ ಸಮಿತಿ ನೀಡಿರುವ ಸಲಹೆಯನ್ನು ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಭಾರಿ ಸಡಿಲಿಕೆ ಇರುವ ಜಿಲ್ಲೆಗಳು
ಶೇ. 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಲ್ಲಿ ಲಾಕ್ಡೌನ್ನ್ನು ದೊಡ್ಡ ಮಟ್ಟಕ್ಕೆ ಸಡಿಲ ಮಾಡಲಾಗಿದೆ.
ಈ 16 ಜಿಲ್ಲೆಗಳಲ್ಲಿ ಯಾವುದಕ್ಕೆಲ್ಲ ಅವಕಾಶ?
- ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗಿದೆ.
- ಹವಾ ನಿಯಂತ್ರಣವನ್ನು ಚಾಲನೆಗೊಳಿಸದೆ ಹೋಟೆಲ್, ಕ್ಲಬ್, ರೆಸ್ಟೋರೆಂಟ್ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಅವಕಾಶ. ಆದರೆ ಶೇ. 50 ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಣೆಗೆ ಮಾತ್ರ ಅನುಮತಿ.
- ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.
- ಬಸ್ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ
- ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡಾ ಚಟುವಟಿಕೆ ನಡೆಸಲು ಅನುಮತಿ
- ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ. 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅವಕಾಶ
- ಲಾಡ್ಜ್ಗಳಲ್ಲಿ ಮತ್ತು ರೆಸಾರ್ಟ್ಗಳಲ್ಲಿ ಶೇ. 50 ಸಾಮರ್ಥ್ಯದೊಂದಿಗೆ ತೆರೆಯಲು ಅವಕಾಶ
- ಜಿಮ್ಗಳನ್ನು ಶೇ 50 ಸಾಮರ್ಥ್ಯದೊಂದಿಗೆ ತೆರೆಯಬಹುದು, ಆದರೆ ಹವಾ ನಿಯಂತ್ರಣ ಅಳವಡಿಸುವಂತಿಲ್ಲ.
13 ಜಿಲ್ಲೆಗಳಲ್ಲಿ ಅನ್ಲಾಕ್ 1.0 ನಿಯಮ ಅನ್ವಯ
ಶೇ. 5 ಕ್ಕಿಂತ ಹೆಚ್ಚಿನ, ಆದರೆ ಶೇ. 10ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.
- ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.
- ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
- ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿರ್ಮಾಣ ಚಟುವಟಿಕೆ ಸಂಬಂಧಿಸಿದ ಅಂಗಡಿಗಳನ್ನು ಅದರಲ್ಲೂ ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ಅಂಗಡಿ ತೆರೆಯಲು ಅವಕಾಶ ನಿಡಲಾಗಿದೆ.
- ಪಾರ್ಕ್ ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
- ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.
- ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.
ಶೇ. 10 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು.
ರಾಜ್ಯವ್ಯಾಪಿ ಅನ್ವಯವಾಗುವಂತೆ ಈ ನಿಯಮಗಳು ಅನ್ವಯ
ಪ್ರತಿ ದಿನ ರಾತ್ರಿ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಜಾರಿಯಲ್ಲಿರಲಿದೆ.
ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ