ವಿದ್ಯಾರ್ಥಿಗಳ ಮುಂದಿನ ಜೀವನದ ದಾರಿಗಳ ಕುರಿತು ಮಾಹಿತಿಯನ್ನು ಒದಗಿಸುವ ಸಲುವಾಗಿ ಎಸ್ಎಸ್ಎಫ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ನಾಳೆ (20-06-2021) ಬೆಳಗ್ಗೆ 10 ಗಂಟೆಗೆ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮವನ್ನು ಆನ್ಲೈನ್ (ZOOM) ಮೂಲಕ ನಡೆಸಲಾಗುತ್ತಿದೆ.
ಎಸ್ಎಸ್ಎಫ್ ಜಿಲ್ಲಾಧ್ಯಕ್ಷರಾದ ಶಾಫಿ ಸಅದಿ ಸೋಮವಾರಪೇಟೆ ರವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕುವೆಂಪು ಯೂನಿವರ್ಸಿಟಿಯ ಅಸಿಸ್ಟೆಂಟ್ ಪ್ರೊಫೆಸರ್ ಆದ ಶಾಕಿರ್‌ರವರು ತರಗತಿ ನಡೆಸಲಿದ್ದಾರೆ.
ಎಸ್ ಎಸ್ ಎಫ್ ಕರ್ನಾಟಕ ರಾಜ್ಯ ಸಮಿತಿಯ ಕ್ಯಾಂಪಸ್ ಕಾರ್ಯದರ್ಶಿ ಶರೀಫ್ ಹೊಸತೋಟ ಉದ್ಘಾಟನೆ ನಿರ್ವಹಿಸುವ ಈ ಕಾರ್ಯಕ್ರಮದಲ್ಲಿ ಪ್ರಮುಖ ವ್ಯಕ್ತಿಗಳು ಭಾಗವಹಿಸಲಿದ್ದಾರೆ.
ಎಸ್ಎಸ್ಎಲ್ಸಿ, ಪಿಯುಸಿ, ಡಿಗ್ರಿ ವಿದ್ಯಾರ್ಥಿಗಳಿಗೆ ನಡೆಸಲ್ಪಡುವ ಈ ಕಾರ್ಯಕ್ರಮದಲ್ಲಿ ಎಲ್ಲಾ ಧರ್ಮದ ವಿದ್ಯಾರ್ಥಿಗಳು
ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಬಹುದೆಂದು ಎಸ್ಎಸ್ಎಫ್ ಕೊಡಗು ಜಿಲ್ಲಾ ಸಮಿತಿಯ ವಿಸ್ಡಮ್ ಕಾರ್ಯದರ್ಶಿ ಝಕರಿಯ ಕೊಂಡಂಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಸೇರಬಯಸುವವರು ಕೆಳಗೆ ನೀಡಿರುವ ವಾಟ್ಸಪ್ ಸಂಖ್ಯೆಯಲ್ಲಿ ಮೆಸೇಜ್ ಮಾಡಿ ZOOMನ ಲಿಂಕನ್ನು ಪಡೆದುಕೊಳ್ಳಬಹುದು.
ಝಕರಿಯ
+91 99023 07541
ಮುಜೀಬ್
+91 94809 06066
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ