ಜೂನ್ 20 : ಕರ್ನಾಟಕ ಮುಸ್ಲಿಂ ಜಮಾಅತ್ ವತಿಯಿಂದ ಕೆಸಿಎಫ್ ಒಮಾನ್ ಪ್ರಾಯೋಜಕತ್ವದಲ್ಲಿ ಮಂಗಳೂರು ನಗರದಲ್ಲಿ ಸೇವೆಗೆ ಸಿದ್ಧವಾಗಿರುವ “ಸಹಾಯ್ ಆಂಬ್ಯುಲೆನ್ಸ್” ಸೇವಾರ್ಪಣೆಯು ನಾಳೆ (21-6-2021) ಬೆಳಿಗ್ಗೆ 10-30 ಕ್ಕೆ ದ.ಕ. ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ನಡೆಯಲಿದೆ.
ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯಾಧ್ಯಕ್ಷ ಮುಫ್ತಿ ಅನ್ವರ್ ಅಲಿ ರಾಮನಗರ ಅಧ್ಯಕ್ಷತೆ ವಹಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ಡಾ. ಕೆ.ವಿ.ರಾಜೇಂದ್ರ ರವರ ಗಣ್ಯ ಉಪಸ್ಥಿತಿಯಲ್ಲಿ, ಖಾಝಿ ಖುರ್ರತುಸ್ಸಾದಾತ್ ಕೂರತ್ ತಂಙಳ್ ಆಂಬ್ಯುಲೆನ್ಸ್ ಅರ್ಪಣೆ ಮಾಡಲಿದ್ದಾರೆ.
ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಹಝ್ರತ್ ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಶುಭ ಹಾರೈಸುವರು.
ಮಂಗಳೂರು ಪೋಲಿಸ್ ಆಯುಕ್ತರಾದ ಎನ್.ಶಶಿಕುಮಾರ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಶಾಸಕ ಯು.ಟಿ.ಖಾದರ್, ಮಾಜಿ ಶಾಸಕ ಮೊಯ್ದಿನ್ ಬಾವ, ಸುನ್ನಿ ಕೋಡಿನೇಶನ್ ಅಧ್ಯಕ್ಷ ಎಸ್.ಪಿ.ಹಂಝ ಸಖಾಫಿ, ಸಹಾಯ್ ಎಲೈಟ್ ಅಲಯನ್ಸ್ ಚೇರ್ಮೇನ್ ಡಾ.ಯು.ಟಿ.ಇಫ್ತಿಕಾರ್, ಕೆಸಿಎಫ್ ಅಂತರರಾಷ್ಟ್ರೀಯ ಅಧ್ಯಕ್ಷ ಡಾ. ಶೇಕ್ ಬಾವ, ಕೆಎಂಜೆ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಂ.ಮುಮ್ತಾಝ್ ಅಲಿ, ಕೆಸಿಎಫ್ ಒಮಾನ್ ಡೈರೆಕ್ಟರ್ ಉಮರ್ ಸಖಾಫಿ ಮಿತ್ತೂರು, ಕೆಸಿಎಫ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಡಿ.ಪಿ.ಯೂಸುಫ್ ಸಖಾಫಿ ಬೈತಾರ್, ಕೆಎಂಜೆ ಮಂಗಳೂರು ತಾಲೂಕು ಅಧ್ಯಕ್ಷ ನಾಸಿರ್ ಲಕ್ಕಿಸ್ಟಾರ್, ಸಹಾಯ್ ಜಿಲ್ಲಾ ಕೋ ಆರ್ಡಿನೇಟರ್ ಕೆ ಪಿ ಸಿರಾಜುದ್ದೀನ್ ಸಖಾಫಿ ಮುಂತಾದವರು ಭಾಗವಾಹಿಸುತ್ತಾರೆಂದು ಸಹಾಯ್ ರಾಜ್ಯ ಕೋ ಆರ್ಡಿನೇಟರ್ ಅಶ್ರಫ್ ಕಿನಾರ ಮಂಗಳೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ