ನವದೆಹಲಿ: ಭಾರತದ ಎಲ್ಲಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ರಾಪಿಡ್ ಪಿಸಿಆರ್ ಟೆಸ್ಟ್ ಸೌಲಭ್ಯಗಳನ್ನು ಸಜ್ಜುಗೊಳಿಸಲಾಗುತ್ತಿದೆ.
ಯುಎಇಗೆ ಹಿಂದಿರುಗುವವರು ನಾಲ್ಕು ಗಂಟೆಗಳ ಒಳಗೆ ರಾಪಿಡ್ ಕೋವಿಡ್ ಪರೀಕ್ಷೆಯ ಫಲಿತಾಂಶವನ್ನು ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.ಭಾರತದಲ್ಲಿ 34 ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಿವೆ.
ಪ್ರಸ್ತುತ ದೆಹಲಿ, ಮುಂಬೈ, ಹೈದರಾಬಾದ್, ಚೆನ್ನೈ ಮತ್ತು ಕೋಲ್ಕತಾ ವಿಮಾನ ನಿಲ್ದಾಣಗಳಲ್ಲಿ ರಾಪಿಡ್ ಟೆಸ್ಟ್ ಕಾರ್ಯನಿರ್ವಹಿಸುತ್ತಿದೆ. ಯುಎಇ ಅನುಮೋದಿಸಿದ ಖಾಸಗಿ ಲ್ಯಾಬ್‌ಗಳ ಸಹಯೋಗದೊಂದಿಗೆ ಈ ವ್ಯವಸ್ಥೆಯನ್ನು ಇತರ ವಿಮಾನ ನಿಲ್ದಾಣಗಳಲ್ಲೂ ಸ್ಥಾಪಿಸಲಾಗುವುದು.