ಬೆಂಗಳೂರು,ಜೂ.23: ಕೋವಿಡ್ ಹಿನ್ನಲೆ ಮುಂದೂಡಲ್ಪಟ್ಟಿರುವ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಇದೇ ಜುಲೈ ಮೂರನೇ ವಾರದಲ್ಲಿ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಕೋವಿಡ್ ಸೋಂಕು ಇಳಿಕೆಯಾಗಿರುವ ಈ ಸಮಯದಲ್ಲಿ ಯಾವ ಮುನ್ನೆಚ್ಚರಿಕೆ ವಹಿಸಿ ಪರೀಕ್ಷೆಯನ್ನು ನಡೆಸಬೇಕು ಎಂಬ ಕುರಿತು ಇಂದು ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.
ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯುಂದ ಹೊರಡಿಸಲಾಗಿದ ಈ ಮಾರ್ಗಸೂಚಿ ಅನುಸರಿಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸುವಂತೆ ಇಲಾಖೆಯ ಎಲ್ಲಾ ಅಧಿಕಾರಿಗಳು ಹಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಇದೇ ವೇಳೆ ಪರೀಕ್ಷೆ ಸಿದ್ಧತೆ ಮಾಡಿಕೊಳ್ಳಲು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದ್ದು, ಪರೀಕ್ಷೆಯಲ್ಲಿ ಭಾಗವಹಿಸುವ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಕಡ್ಡಾಯ ಲಸಿಕೆ ಪಡೆದುಕೊಂಡಿರಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ಹೊರಡಿಸಿದೆ.
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನೀಡಿರುವ SOP ಅಡಿಯಲ್ಲಿ ಪರೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ. ಪರೀಕ್ಷೆಗೆ ಹಾಜರಾಗುವ ಶಿಕ್ಷಕರು ಮತ್ತು ಸಿಬ್ಬಂದಿಗಳು ಮೊದಲ ಡೋಸ್ ಲಸಿಕೆ ಪಡೆದಿರಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಮಾರ್ಗಸೂಚಿ ಅಳವಡಿಕೆ ಹಾಗೂ ಪೂರ್ವ ಸಿದ್ಧತೆ ಪರಿಶೀಲನೆ ಅಗತ್ಯವಾಗಿ ನಡೆಸುವಂತೆ ಸೂಚನೆ ನೀಡಲಾಗಿದೆ.
ಮಾರ್ಗಸೂಚಿಗಳು:
- ಪ್ರತಿ ಪರೀಕ್ಷಾ ಕೇಂದ್ರದ ಕೊಠಡಿ, ಶೌಚಾಲಯ ಸೇರಿದಂತೆ ಕೇಂದ್ರದ ಆವರಣದಲ್ಲಿ ಪರೀಕ್ಷೆಗೆ ಮುನ್ನ ಮತ್ತು ನಂತರ ಸ್ಯಾನಿಟೈಸ್ ಸಿಂಪಡಣೆ ನಡೆಸಿ ಸ್ವಚ್ಛಗೊಳಿಸಬೇಕು
- ಒಂದು ಪರೀಕ್ಷಾ ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದ್ದು, ಒಂದು ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿಗಳನ್ನು ಮಾತ್ರ ಕೂರಿಸಬೇಕು
- ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ವೇಳೆ ಮತ್ತು ಪರೀಕ್ಷೆ ಕೊಠಡಿಗಳಲ್ಲಿ ಆರು ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು
- ಗ್ರಾಮೀಣ ಭಾಗದ ಶಾಲೆಗಳ ವಿದ್ಯಾರ್ಥಿಗಳು ತಾಲೂಕು ಕೇಂದ್ರಕ್ಕೆ ಹೋಗದಂತೆ ಪರೀಕ್ಷಾ ಕೇಂದ್ರ ರಚಿಸಬೇಕು.
- ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ನೀರಿನ ಬಾಟಲಿ ತರಲು ಅವಕಾಶ ನೀಡಬೇಕು. ವಿದ್ಯಾರ್ಥಿಗಳ ಬೇಡಿಕೆ ಇದ್ದರೆ ಆಹಾರದ ಡಬ್ಬಿಯನ್ನು ಪರೀಕ್ಷಾ ಕೇಂದ್ರಕ್ಕೆ ಕೊಡೊಯ್ಯಲು ಅವಕಾಶ ನೀಡಬೇಕು.
- ಕೆಮ್ಮು, ನೆಗಡಿ,ಜ್ವರದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿಗಳನ್ನು ವಿಶೇಷ ಕೊಠಡಿ ಎಂಬ ಹೆಸರಿನಲ್ಲಿ ಕಾಯ್ದಿರಿಸಬೇಕು
- ಪರೀಕ್ಷಾ ಕೇಂದ್ರ ಪ್ರವೇಶ ಮಾಡುತ್ತಿದ್ದಂತೆ ವಿದ್ಯಾರ್ಥಿಗಳು ಆರೋಗ್ಯ ತಪಾಸಣೆಗೆ ಕೌಂಟರ್ ನಿರ್ಮಿಸಬೇಕು
- ವಿದ್ಯಾರ್ಥಿಗಳ ಥರ್ಮಲ್, ಸ್ಕ್ಯಾನರ್, ಪಲ್ಸ್ ಆಕ್ಸಿಮೀಟರ್, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಡುವುದು ಕಡ್ಡಾಯ
- ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಆರೋಗ್ಯ ಕೌಂಟರ್ ಗಳಲ್ಲಿ ಮಾಸ್ಕ್ ವಿತರಣೆ ಮಾಡಬೇಕು, ಮತ್ತು ಹ್ಯಾಂಡ್ ಸ್ಯಾನಿಟೈಸ್ ಅನ್ನು ಪ್ರತಿ ವಿದ್ಯಾರ್ಥಿಗಳಿಗೆ ಮಾಡಬೇಕು
ತುರ್ತು ಚಿಕಿತ್ಸಾ ವಿಧಾನ
- ಪ್ರತಿ ತಾಲೂಕಿಗೊಂದು ತುರ್ತು ಚಿಕಿತ್ಸಾ ವಾಹನ ಮೀಸಲಿಡುವುದು
- ಪರೀಕ್ಷಾ ಸಿಬ್ಬಂದಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು
- ಕೋವಿಡ್ ಕೇರ್ ಸೆಂಟರ್ ಸ್ಥಾಪನೆ
- ಪಾಸಿಟಿವ್ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆ
- ತಾಲೂಕಿಗೊಂದು ಕೋವಿಡ್ ಕೇರ್ ಸೆಂಟರ್ ಸ್ಥಾಪನೆ
- ಕೋವಿಡ್ ಆರೈಕೆ ಕೇಂದ್ರದಲ್ಲಿ ಒಂದು ಆಂಬುಲೆನ್ಸ್ ವಾಹನ ಮೀಸಲು ಇಡಬೇಕು
ಈ ಎಲ್ಲಾ ಮಾರ್ಗಸೂಚಿಗಳ ಸಮರ್ಪಕ ಅನುಷ್ಠಾನದ ಕುರಿತು ಜೂನ್ 28 ರಂದು ಸಚಿವ ಸುರೇಶ್ ಕುಮಾರ್ ಅವರು, ಜಿಲ್ಲಾಧಿಕಾರಿಗಳು, ಸಿಇಒ,ಎಸ್.ಪಿ,ಡಿಹೆಚ್ಒ ಹಾಗೂ ಖಜಾನಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಪೆರೆನ್ಸ್ ನಡೆಸಿ ಮತ್ತೆ ಸಭೆ ನಡೆಸಲಿದ್ದಾರೆ.