ಅಲ್ ಮದೀನತುಲ್ ಮುನವ್ವರ ಎಜುಕೇಶನಲ್ ಸೆಂಟರ್, ಮೂಡಡ್ಕ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯ ವಾರ್ಷಿಕ ಮಹಾಸಭೆಯು ದಿನಾಂಕ ಜೂನ್ 25 ಶುಕ್ರವಾರ ಬೆಳಿಗ್ಗೆ ಝೂಮ್ ಮೂಲಕ ಹಾಲಿ ಅಧ್ಯಕ್ಷರಾದ ಬಹು ಯೂಸುಫ್ ಹಾಜಿ ಕಳಂಜಿಬೈಲು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಸ್ಥೆಯ ಕಾರ್ಯಾಧ್ಯಾಕ್ಷರಾದ ಸಯ್ಯಿದ್ ಇಸ್ಮಾಯಿಲ್ ಅಲ್ ಹಾದಿ ತಂಙಲ್ ಅವರು ದುಆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪ್ರಧಾನ ಕಾರ್ಯದರ್ಶಿ ಫಾರೂಕ್ ಮುಸ್ಲಿಯಾರ್ ಸಭಿಕರನ್ನು ಸ್ವಾಗತಿಸಿ, ಸಂಸ್ಥೆಯ ಪ್ರಾಂಶುಪಾಲರಾದ ಸಲಾವುದ್ದೀನ್ ಸಖಾಫಿ ಮಾಡನ್ನೂರು ಅವರು ಸಭೆಯನ್ನು ಉದ್ಘಾಟಿಸಿದರು.
ಜನರಲ್ ಮ್ಯಾನೇಜರ್ ಅಶ್ರಫ್ ಸಖಾಫಿ ಮಾಡಾವು ರವರು ಪ್ರಾಸ್ತಾವಿಕ ಮಾತುಗಳನ್ನಾಡಿದ ನಂತರ ಪ್ರಧಾನ ಕಾರ್ಯದರ್ಶಿಯವರು ಸಮಿತಿಯ ಕಳೆದ ವಾರ್ಷಿಕ ಅವಧಿಯ ಲೆಕ್ಕ ಪತ್ರ ಮಂಡನೆ ಮಾಡಿದರು. ಸಭೆಯು ಒಕ್ಕೊರಳಿನಿಂದ ಸಮ್ಮತಿಸಿ ಹಾಲಿ ಸಮಿತಿಯನ್ನು ಈ ಕೆಳಗಿನಂತೆ ಪುನರ್ರಚಿಸಲಾಯಿತು.
ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ: 2021-2022
ಅಧ್ಯಕ್ಷರು: ಅಬ್ದುಲ್ ರಶೀದ್ ಹಾಜಿ ಬೆಳ್ಳಾರೆ. ಉಪಾಧ್ಯಕ್ಷರು: PK ದಾವೂದ್ ಸಅದಿ ಉರುವಾಲುಪದವು. ಪ್ರಧಾನ ಕಾರ್ಯದರ್ಶಿ ಹಬೀಬುಲ್ಲಾ ಟಿ ಎಚ್. ಜೊತೆ ಕಾರ್ಯದರ್ಶಿಗಳು ಇಬ್ರಾಹಿಂ ಬೇಂಗಿಲ. ಕೋಶಾಧಿಕಾರಿ ಅಬ್ದುಲ್ ಹಕೀಂ ಮೇದರಬೆಟ್ಟು. ಸಲಹೆಗಾರರು ಉಮರ್ ಹಾಜಿ ಅಲಕೆಮಜಲ್, ಅಬ್ದುಲ್ ಅಝೀಝ್ ಬಜ್ಪೆ, ದಾವೂದ್ ಹಾಜಿ ಕಜೆಮಾರ್, ಅಬ್ದುಲ್ ರಝಾಕ್ ಮುಸ್ಲಿಯಾರ್ ಮಾಚಾರ್, ಯೂಸುಫ್ ಹಾಜಿ ಕಳಂಜಿಬೈಲ್. ಲೆಕ್ಕ ಪರಿಶೋಧಕರು ಫಾರೂಕ್ ಮುಸ್ಲಿಯಾರ್ ಕುಪ್ಪೆಟ್ಟಿ, ಶರೀಫ್ ಗುಂಪಕಲ್ಲು ಮುಂತಾದವರನ್ನು ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಯಿತು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ