ಬೆಳ್ತಂಗಡಿ: ಅಂತಾರಾಷ್ಟ್ರೀಯ ಮಾದಕದ್ರವ್ಯ ಸೇವನೆ, ಕಳ್ಳಸಾಗಣಿಕೆ ವಿರೋಧಿ ದಿನದ ಅಂಗವಾಗಿ ಎಸ್ಸೆಸ್ಸೆಫ್ ಕ್ಯಾಂಪಸ್ ದ.ಕ ಜಿಲ್ಲೆ (ಈಸ್ಟ್) ವತಿಯಿಂದ ಮಾದಕದ್ರವ್ಯ ಸೇವನೆಯ ವಿರುದ್ದ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಆನ್ಲೈನ್ ಮೂಲಕ ನಡೆಸಲಾಯಿತು.
ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಜಿ.ಕೆ ಇಬ್ರಾಹಿಂ ಅಮ್ಜದಿ ಮಂಡೆಕೋಲು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್.ವೈ.ಎಸ್ ರಾಜ್ಯ ಪ್ರ. ಕಾರ್ಯದರ್ಶಿ ಡಾ. ಎಂ.ಎಸ್.ಎಂ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ ಮಾತನಾಡಿ, ಮನುಕುಲದ ಮುಂದಿರುವ ಅತೀ ದೊಡ್ಡ ಸವಾಲಾಗಿರುವ ಅಮಲು ಪದಾರ್ಥಗಳ ಸೇವನೆಯಿಂದ ಈ ಸಮಾಜವನ್ನು ಮುಕ್ತಿಗೊಳಿಸಲು ಧಾರ್ಮಿಕ ಹಾಗೂ ಸಾಮಾಜಿಕ ಸಂಘ ಸಂಸ್ಥೆಗಳು, ಯುವಜನ ಸಂಘಟನೆಗಳು ಜಾಗೃತಿ ಅಭಿಯಾನಗಳನ್ನು ಕೈಗೊಳ್ಳುವುದರ ಮೂಲಕ ಮಾತ್ರ ಸಾದ್ಯ ಎಂದು ಅಭಿಪ್ರಾಯಪಟ್ಟರು.
ವೈದ್ಯಕೀಯ ಸಲಹಾ ತಜ್ಞರಾದ ಡಾ. ವೆಂಕಟಕೃಷ್ಣ ಭಟ್ ಸುಳ್ಯ ಮುಖ್ಯ ಅತಿಥಿಗಳಾಗಿ ಮಾತನಾಡಿ, ಮಾನಸಿಕ ಸ್ಥಿರತೆಯನ್ನು ಚಂಚಲಗೊಳಿಸುವ ಮಾದಕ ವಸ್ತುಗಳ ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಮೂಲಕ ಜೀವನದ ಅಂತ್ಯಕ್ಕೆ ಕಾರಣವಾಗುತ್ತದೆ ಎಂದರು . ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಸವಿವರವಾಗಿ ಮಾತನಾಡಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿನ್ಸೆಂಟ್ ಪಾಯ್ಸ್ ಮಾತನಾಡಿ, ಅಮಲು ಪದಾರ್ಥಗಳ ಮಾರಾಟ ಜಾಲದಲ್ಲಿ ಯುವ ಜನತೆಯನ್ನು ಗುರಿಯಾಗಿರಿಸಿಕೊಂಡು ಕಾರ್ಯಾಚರಿಸುತ್ತಿರುವ ಹಿನ್ನೆಲೆಯಲ್ಲಿ ಯುವ ಜನತೆ ಎಚ್ಚೆತ್ತುಕೊಳ್ಳುವುದರೊಂದಿಗೆ ಸ್ವತಃ ಜಾಗೃತರಾಗಿ ಇತರರಿಗೆ ಜಾಗೃತಿ ಮೂಡಿಸಬೇಕೆಂಬ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ರಶೀದ್ ಮಡಂತ್ಯಾರು ಸ್ವಾಗತಿಸಿ, ಕನ್ವೀನರ್ ಅಶ್ಫಾಕ್ ಕೊಡುಂಗಾಯಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ