ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿ ದರ ಇಳಿಕೆಯಾದ ಹಿನ್ನೆಲೆಯಲ್ಲಿ ಲಾಕ್ಡೌನ್ ಸಡಿಲಿಕೆಯನ್ನು ಜು.2ರಿಂದ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಮತ್ತು ಸಂಚಾರಕ್ಕೆ ಅನುಮತಿ ನೀಡಿ ರಾಜ್ಯ ಸರಕಾರ ಆದೇಶಿಸಿದೆ.
ಕೋವಿಡ್ ಪಾಸಿಟಿವಿ ದರ ಕಡಿಮೆಯಾದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆ ‘ಪಟ್ಟಿ 1’ ರಲ್ಲಿ ಸೇರ್ಪಡೆಯಾಗಿದೆ. ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಗಣನೀಯವಾಗಿ ಕಡಿಮಯಾಗಿದೆ. ಈ ಹಿನ್ನೆಲೆ ಇಂದು ನೂತನ ಮಾರ್ಗಸೂಚಿ ಹೊರಡಿಸಲಾಗಿದ್ದು, ನಾಳೆಯಿಂದ ಅನ್ವಯವಾಗುವಂತೆ ಪ್ರತಿ ದಿನ ಸಂಜೆ 5 ಗಂಟೆಯವರಿಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಹಾಗೂ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಈ ಆದೇಶ ಜುಲೈ 5 ಮುಂಜಾನೆ 5 ಗಂಟೆಯವರೆಗೆ ಮಾತ್ರ ಜಾರಿಯಲ್ಲಿರಲಿದೆ. ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಇರಲಿದ್ದು, ಈ ಸಂದರ್ಭ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಹಾಲು, ದಿನಸಿ, ಮೆಡಿಕಲ್, ತರಕಾರಿ, ಹಣ್ಣು ಹಂಪಲು, ಪತ್ರಿಕೆ, ಮೀನು- ಮಾಂಸದ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಹಾಗೂ ಭಾನುವಾರ ವಾರಾಂತ್ಯ ಕರ್ಫ್ಯೂ ಜಾರಿಯಾಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.