ಕೋವಿಡ್ 19 ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಭಾರತ ಮತ್ತು ಸೌದಿ ಅರೇಬಿಯಾ ನಡುವೆ ನೇರ ವಿಮಾನಯಾನವನ್ನು ನಿರ್ಬಂಧಿಸಲಾಗಿದ್ದು, ಇದನ್ನು ಶೀಘ್ರದಲ್ಲೇ ತೆರವುಗೊಳಿಸುವ ಕುರಿತು ಸೌದಿ ವಿದೇಶಾಂಗ ಸಚಿವರಾದ ಫೈಸಲ್ ಬಿನ್ ಫರ್ಹಾನ್ ಹಾಗೂ ಭಾರತದ ವಿದೇಶಾಂಗ ಸಚಿವ ಎಸ್.ಜಯಶಂಕರ್ ಪರಸ್ಪರ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಎಸ್ ಜಯಶಂಕರ್ ಟ್ವಿಟರ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ ಬಗ್ಗೆ ಹಾಗೂ ಕೋವಿಡ್ ಸಂದರ್ಭಗಳ ಬಗ್ಗೆಯೂ ಚರ್ಚಿಸಲಾಗಿದೆ. ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಚರ್ಚೆಯು ಪ್ರಯೋಜನಕಾರಿಯಾಗಲಿದೆ ಎಂದು ಅನಿವಾಸಿ ಭಾರತೀಯರು ಆಶಿಸಿದ್ದಾರೆ.
ಇದೇ ಮೊದಲ ಬಾರಿಗೆ ವಿದೇಶಾಂಗ ಸಚಿವ ಡಾ.ಎಸ್.ಜಯಶಂಕರ್ ಅವರು ಸೌದಿ ವಿದೇಶಾಂಗ ಸಚಿವರೊಂದಿಗೆ ಹೊಸ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ.ಇಟಲಿಯಲ್ಲಿ ನಡೆದ ಜಿ 20 ಶೃಂಗಸಭೆಗೆ ಮುನ್ನ ವಿದೇಶಾಂಗ ಸಚಿವರ ಸಭೆಯ ನಡುವೆ ಈ ಮಾತುಕತೆ ನಡೆದಿದೆ.