ನವದೆಹಲಿ,ಜು.06: ಕೊರೋನಾ 2ನೇ ಅಲೆಯಿಂದ, ಕಠಿಣ ನಿರ್ಬಂಧ, ಸೂಕ್ತ ಚಿಕಿತ್ಸೆ ಹಾಗೂ ಲಸಿಕೆ ಮೂಲಕ ವೈರಸ್ ನಿಯಂತ್ರಣಕ್ಕೆ ಬಂದಿದೆ.ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ಅನ್ಲಾಕ್ ಜಾರಿಯಾಗಿದೆ. ಅನ್ಲಾಕ್ ಒಂದೊಂದೆ ಹಂತಕ್ಕೆ ವಿಸ್ತರಣೆಯಾಗುತ್ತಿದ್ದಂತೆ ಇದೀಗ ಕೇಂದ್ರ ಆರೋಗ್ಯ ಇಲಾಖೆ ಸುದ್ದಿಗೋಷ್ಠಿ ನಡೆಸಿ ಮತ್ತೆ ಲಾಕ್ಡೌನ್ ಎಚ್ಚರಿಕೆ ನೀಡಿದೆ.
ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ಲಾಕ್ಡೌನ್ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಕಾರಣವೂ ಇದೆ. ಅನ್ಲಾಕ್ ಘೋಷಣೆಯಾದ ಬೆನ್ನಲ್ಲೇ ಹಿಮಾಚಲ ಪ್ರದೇಶ, ಕುಲು, ಮನಾಲಿ ಸೇರಿದಂತೆ ಪ್ರವಾಸಿ ತಾಣಗಳಿಗೆ ಜನ ಸಾಗರವೇ ಹರಿದುಬಂದಿದೆ. ಶೇಕಡಾ 90 ರಷ್ಟು ಕೊರೋನಾ ನಿಯಮ ಪಾಲಿಸುತ್ತಿಲ್ಲ. ಇದು ಅಪಾಯಕ್ಕೆ ಅಹ್ವಾನ ನೀಡಿದಂತೆ. ಹೀಗಾಗಿ ಮತ್ತೊಂದು ಲಾಕ್ಡೌನ್ ಸಂಕಷ್ಟ ತರಬೇಡಿ ಎಂದು ಜನರಿಗೆ ಎಚ್ಚರಿಸಿದ್ದಾರೆ.
ಮಸೂರಿ, ಉತ್ತರಖಂಡ, ಶಿಮ್ಲಾ, ಧರ್ಮಶಾಲಾದಲ್ಲೂ ಪ್ರವಾಸಿಗರು ಸಂಖ್ಯೆ ದಿಢೀರ್ ಹೆಚ್ಚಾಗಿದೆ. ಕೊರೋನಾ ಮಾರ್ಗಸೂಚಿ ಪಾಲನೆ ಅಗತ್ಯ. 2ನೇ ಅಲೆ ಇನ್ನೂ ಸಂಪೂರ್ಣವಾಗಿ ತಗ್ಗಿಲ್ಲ. ಜೊತೆಗೆ ಡೆಲ್ಟಾ ಪ್ಲಸ್, 3ನೇ ಅಲೆ ಭೀತಿ ಕೂಡ ನಮ್ಮ ಮುಂದಿದೆ. ಹೀಗಾಗಿ ಜನರ ಅಜಾಗರೂಕತೆಯಿಂದ ಅಮಾಯಕರನ್ನು ಬಲಿಯಾಗಿಸಬೇಡಿ ಎಂದು ಲಾವ್ ಅಗರ್ವಾಲ್ ಎಚ್ಚರಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ