ಮಂಗಳೂರು,ಜುಲೈ.11: ರೈಲ್ವೇ ಇಲಾಖೆಯ ವಿನೂತನ ವಿಸ್ಡಾಡೋಮ್ ಕೋಚ್ ಗೆ ರಾಜ್ಯದಲ್ಲಿ ಇಂದು ಚಾಲನೆ ದೊರಕಿದೆ..ರಾಜ್ಯದ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮಂಗಳೂರು ಹಾಗೂ ಬೆಂಗಳೂರಿನ ನಡುವೆ ಹಗಲಿನಲ್ಲಿ ವಿಸ್ಡಾಡೋಮ್ ಕೋಚ್ ಅಳವಡಿಸಲಾಗಿದೆ.
ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್ ರೈಲಿನ ಸಂಚಾರಕ್ಕೆ ಭಾನುವಾರ ಬೆಳಿಗ್ಗೆ 9 ಗಂಟೆಗೆ ಚಾಲನೆ ನೀಡಲಾಗಿದೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಲಾಗಿದೆ. ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ವಿಸ್ಡಾಡೋನ್ ಕೋಚ್ ಗೆ ಚಾಲನೆ ನೀಡಿದರು. ಈ ಕಾರ್ಯಕ್ರಮ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಅಧ್ಯಕ್ಷತೆಯಲ್ಲಿ ನಡೆದಿದ್ದು, ಶಾಸಕರಾದ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವಿಸ್ಟಾಡೋಮ್ ಬೋಗಿಗಳನ್ನು ಒಳಗೊಂಡಂತಹ ಈ ರೈಲು ದಕ್ಷಿಣ ಭಾರತದಲ್ಲಿ ರೈಲ್ವೆ ಇಲಾಖೆಯಿಂದ ಮೊದಲ ಬಾರಿಗೆ ಪರಿಚಯಿಸಲಾಗಿದೆ. ಮಂಗಳೂರು ಜಂಕ್ಷನ್ ನಲ್ಲಿ ರೈಲು ಸಂಖ್ಯೆ 06540/06539 ಮಂಗಳೂರು ಜೆಎನ್ – ಯಶವಂತಪುರ ಎಕ್ಸ್ ಪ್ರೆಸ್ ರೈಲಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಸಿರು ನಿಶಾನೆ ತೋರಿದ್ದಾರೆ. ಮಂಗಳೂರು ಜಂಕ್ಷನ್ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಚಲಿಸುವ ಈ ಎಕ್ಸ್‌ಪ್ರೆಸ್ ರೈಲಿಗೆ ಅಳವಡಿಸಲಾದ ವಿಸ್ಟಾಡೋಮ್ ಬೋಗಿಗಳು ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸುವಾಗ ರಮಣೀಯ ಪ್ರಾಕೃತಿಕ ಸೊಬಗನ್ನು ನೋಡಬಹುದಾಗಿದೆ. ಎತ್ತರದ ಪರ್ವತಗಳ ಅದ್ಭುತ ನೋಟ, ಕಣಿವೆಗಳು, ಆಳವಾದ ಕಮರಿಗಳು ಮತ್ತು ಹಚ್ಚ ಹಸಿರಿನ ಈ ಪ್ರದೇಶವು ಮಾನ್ಸೂನ್‌ನಲ್ಲಿ ಇನ್ನಷ್ಟು ಸುಂದರ ದೃಶ್ಯಾವಳಿಗಳು ನೋಡುಗರನ್ನು ಬೆರಗುಗೊಳಿಸುತ್ತದೆ.
ವಿಸ್ಟಾಡೋಮ್ ಒಳಗೆ ಏನೇನಿದೆ?
ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲಿ 44 ಆಸನ ಸಾಮರ್ಥ್ಯ ಹೊಂದಿದೆ, ಅಗಲವಾದ, ದೊಡ್ಡ ಕಿಟಕಿಗಳು ಪ್ರಯಾಣಿಕರಿಗೆ ಸ್ಪಷ್ಟವಾದ ನೋಟವನ್ನು ನೀಡುತ್ತದೆ. ವಿಸ್ಟಾಡೋಮ್ ಬೋಗಿಗಳನ್ನು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಎಲ್‌ಎಚ್‌ಬಿ (ಲಿಂಕೆ-ಹಾಫ್ಮನ್-ಬುಶ್ ಪ್ಲಾಟ್‌ಫಾರ್ಮ್ / ತಂತ್ರಜ್ಞಾನ) ನಲ್ಲಿ ತಯಾರಿಸಲಾಗಿದೆ. ಈ ಬೋಗಿಗಳು ಗಾಜಿನ ಮೇಲ್ಚಾವಣಿ ಹೊಂದಿದ್ದು, ಇದು ಬೇಸಿಗೆಯಲ್ಲೂ ಆಕಾಶದ ಸ್ಪಷ್ಟ ನೋಟಗಳನ್ನು ನೀಡುತ್ತದೆ. ಕೋಚ್‌ನಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆಗಳು, ಎಲ್‌ಇಡಿ, ಓವನ್ ಮತ್ತು ರೆಫ್ರಿಜರೇಟರ್, ಮಿನಿ ಪ್ಯಾಂಟ್ರಿ, ಮಲ್ಟಿ-ಟೈರ್ಡ್ ಸ್ಟೀಲ್ ಲಗೇಜ್ ಕಪಾಟುಗಳು, ಪ್ರತಿ ಸೀಟಿನಲ್ಲಿ ಮೊಬೈಲ್ ಚಾರ್ಜಿಂಗ್ ಸಾಕೆಟ್ ಗಳಿವೆ. ಇದಲ್ಲದೆ, ಕೋಚ್ ಸ್ವಯಂಚಾಲಿತ ಸ್ಲೈಡಿಂಗ್ ಬಾಗಿಲುಗಳು ಮತ್ತು ಜೈವಿಕ ಶೌಚಾಲಯಗಳನ್ನು ಹೊಂದಿದೆ.
ಮಂಗಳೂರು-ಮತ್ತು ಬೆಂಗಳೂರು ನಡುವೆ ಸಂಚರಿಸುವ ಹಗಲು ರೈಲಿನಲ್ಲಿ ವಿಸ್ಡಾಡೋನ್ ಕೋಚ್ ಅಳವಡಿಸಲಾಗಿದ್ದು,ಮೊದಲ ಪಯಣದಲ್ಲಿ 84 ಆಸನಗಳ ಪೈಕಿ 73 ಆಸನಗಳು ಈಗಾಗಲೇ ಭರ್ತಿಯಾಗಿವೆ. ಸುಬ್ರಹ್ಮಣ್ಯ, ಸಕಲೇಶಪುರ ದ ಪಶ್ಚಿಮ ಘಟ್ಟ ಪ್ರದೇಶಗಳ ಅದ್ಭುತ ಸೌಂದರ್ಯ ವನ್ನು ಕಾಣಲು ವಿಸ್ಡಾಡೋನ್ ಕೋಚ್ ಅದ್ಭುತ ಅವಕಾಶವನ್ನು ಮಾಡಿಕೊಟ್ಟಿದೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ