ಹೊಸದಿಲ್ಲಿ: ಮುಂಬಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತವನ್ನು ಅದಾನಿ ಗ್ರೂಪ್ ಮಂಗಳವಾರ ವಹಿಸಿಕೊಂಡಿದೆ. ಮುಂಬಯಿ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ನ (ಎಂಐಎಎಲ್) ಶೇ.74ರಷ್ಟು ಷೇರುಗಳನ್ನು ಅದಾನಿ ಗ್ರೂಪ್ನ ಅಂಗ ಸಂಸ್ಥೆ ಅದಾನಿ ಏರ್ಪೋರ್ಟ್ ಹೋಲ್ಡಿಂಗ್ಸ್ (ಎಎಎಚ್ಎಲ್) ತನ್ನದಾಗಿಸಿಕೊಂಡಿದೆ. ಇದರೊಂದಿಗೆ ಇದರ ಆಡಳಿತವನ್ನೂ ತನ್ನ ಕೈವಶ ಮಾಡಿಕೊಂಡಿದೆ.
ಮುಂಬಯಿ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ನ ಉಳಿದ ಶೇ.26ರಷ್ಟು ಷೇರುಗಳನ್ನು ಭಾರತೀಯ ವಿಮಾನ ಪ್ರಾಧಿಕಾರ ಉಳಿಸಿಕೊಂಡಿದೆ. ಈ ಹಿಂದೆ ಇದರ ಆಡಳಿತಾತ್ಮಕ ನಿಯಂತ್ರಣ ಜಿವಿಕೆ ಗ್ರೂಪ್ ಕೈಯಲ್ಲಿತ್ತು.
ಅದಾನಿ ಗ್ರೂಪ್ ವಿಮಾನ ನಿಲ್ದಾಣವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಿದ್ದು, ಸ್ಥಳೀಯರಿಗೆ ಸಾವಿರಾರು ಉದ್ಯೋಗ ಕಲ್ಪಿಸಲಿದೆ ಎಂದು ಸಮೂಹ ಸಂಸ್ಥೆಯ ಅಧ್ಯಕ್ಷ ಗೌತಮ್ ಅದಾನಿ ಅವರು ಟ್ವೀಟ್ ಮಾಡಿದ್ದಾರೆ.
ಈ ಡೀಲ್ನೊಂದಿಗೆ ದೇಶದ 7 ವಿಮಾನ ನಿಲ್ದಾಣಗಳನ್ನು ನಿರ್ವಹಿಸುತ್ತಿರುವ ಭಾರತದ ಅತಿ ದೊಡ್ಡ ಏರ್ಪೋರ್ಟ್ ನಿರ್ವಾಹಕ ಸಂಸ್ಥೆಯಾಗಿ ಅದಾನಿ ಗ್ರೂಪ್ ಹೊರಹೊಮ್ಮಿದೆ. ಅಹಮದಾಬಾದ್, ಲಖನೌ, ಮಂಗಳೂರು, ಜೈಪುರ, ಗುವಾಹಟಿ, ತಿರುವನಂತಪುರಂ ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್ ನಿರ್ವಹಿಸುತ್ತಿದೆ. ಇದರ ಜತೆಗೆ ನವಿ ಮುಂಬಯಿ ವಿಮಾನ ನಿಲ್ದಾಣದ ಕಾರ್ಯಾಚರಣೆಗಳನ್ನೂ ಅದಾನಿ ಗ್ರೂಪ್ ನಡೆಸುತ್ತಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ