ನವದೆಹಲಿ: ಕೋವಿಡ್ -19 ದುರಂತದ ಸಂದರ್ಭದಲ್ಲಿ ಆಸ್ಪತ್ರೆಗಳು ಮಾನವೀಯ ಸೇವೆ ಸಲ್ಲಿಸುವ ಬದಲು ಬೃಹತ್ ರಿಯಲ್ ಎಸ್ಟೇಟ್ ಉದ್ಯಮಗಳಂತೆ ಮಾರ್ಪಟ್ಟಿವೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ವಸತಿ ಕಾಲೋನಿಗಳಲ್ಲಿ 2-3 ಕೊಠಡಿಗಳ ಫ್ಲಾಟ್ ಗಳಿಂದ ನಡೆಯುತ್ತಿರುವ ನರ್ಸಿಂಗ್ ಹೋಮ್ ಗಳು ಅಗ್ನಿ ಮತ್ತು ಕಟ್ಟಡ ಸುರಕ್ಷತಾ ನಿಯಮಗಳು ಉಲ್ಲಂಘನೆಯಾಗದಂತೆ ಸ್ವಲ್ಪ ಗಮನ ಹರಿಸಬೇಕಾಗಿದೆ ಎಂದು ನಿರ್ದೇಶನ ನೀಡಿದೆ.
ಕಟ್ಟಡದ ಉಪ-ಕಾನೂನು ಉಲ್ಲಂಘನೆಯನ್ನು ಸರಿಪಡಿಸಲು ಆಸ್ಪತ್ರೆಗಳಿಗೆ ಮುಂದಿನ ವರ್ಷದ ಜುಲೈವರೆಗೂ ಗಡುವನ್ನು ವಿಸ್ತರಿಸಿರುವ ಗುಜರಾತ್ ಸರ್ಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಕಟ್ಟಡಗಳಿಗೆ ಬೆಂಕಿ ಬಿದ್ದ ಘಟನೆಗಳಲ್ಲಿ ಜನರು ಸಾವನ್ನಪ್ಪುವುದು ಮುಂದುವರೆದಿದೆ. ಮಾನವ ದುರಂತದ ಸಂದರ್ಭದಲ್ಲಿ ಮಾನವೀಯ ಸೇವೆ ಸಲ್ಲಿಸುವ ಬದಲು ಈ ಆಸ್ಪತ್ರೆಗಳು ಬೃಹತ್ ರಿಯಲ್ ಎಸ್ಟೇಟ್ ಉದ್ಯಮಗಳಂತೆ ಮಾರ್ಪಟ್ಟಿವೆ ಎಂದು ಹೇಳಿದೆ.
ಕಳೆದ ವರ್ಷದ ಆದೇಶದಂತೆ ಗುಜರಾತ್ ಸರ್ಕಾರ ಗಡುವು ವಿಸ್ತರಿಸಿಲ್ಲ, ಆಸ್ಪತ್ರೆಗಳು ತೊಂದರೆಯಲ್ಲಿರುವ ರೋಗಿಗಳಿಗೆ ಸಹಾಯವನ್ನು ಒದಗಿಸಲು ಉದ್ದೇಶಿಸಿವೆ ಆದರೆ ಅವು ಹಣದ ಗಣಿಗಾರಿಕೆ ಯಂತ್ರಗಳಾಗಿವೆ ಎಂದು ನ್ಯಾಯಮೂರ್ತಿಗಳಾದ ಡಿ. ವೈ. ಚಂದ್ರಚೂಡ್ ಮತ್ತು ಎಂ ಆರ್ ಶಾ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು.
ಕೋವಿಡ್ ದುರಂತದ ಸಂದರ್ಭದಲ್ಲಿ ಆಸ್ಪತ್ರೆಗಳು ಬೃಹತ್ ಉದ್ಯಮಗಳಾಗಿ ರೂಪುಗೊಂಡಿವೆ. ಈ ರೀತಿಯ ನರ್ಸಿಂಗ್ ಹೋಮ್ ಗಳು, ವಸತಿ ಕಾಲೋನಿಗಳಲ್ಲಿ ಎರಡ್ಮೂರು ಕೊಠಡಿಗಳ ಫ್ಲಾಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವುಗಳು ಕೆಲಸ ನಿರ್ವಹಿಸಲು ಅವಕಾಶ ನೀಡಬಾರದು, ಈ ಆಸ್ಪತ್ರೆಗಳನ್ನು ಬಂದ್ ಮಾಡುವುದು ಒಳ್ಳೆಯದು ಮತ್ತು ರಾಜ್ಯ ಸರ್ಕಾರ ಅಗತ್ಯ ಮೂಲಸೌಕರ್ಯ ಒದಗಿಸಬೇಕೆಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
ನಾಸಿಕ್, ಮಹಾರಾಷ್ಟ್ರದಲ್ಲಿ ಕಳೆದ ವರ್ಷ ಸಂಭವಿಸಿದ ಬೆಂಕಿ ಘಟನೆಗಳನ್ನು ಉಲ್ಲೇಖಿಸಿದ ನ್ಯಾಯಪೀಠ, ಗುಜರಾತ್ ಸರ್ಕಾರ ಅಧಿಸೂಚನೆಯನ್ನು ಹಿಂದಕ್ಕೆ ಪಡೆಯಬೇಕು ಹಾಗೂ ಒಂದು ವಾರದೊಳಗೆ ಅಧಿಸೂಚನೆ ಕುರಿತು ವಿವರಣೆ ನೀಡಬೇಕೆಂದು ಕೋರಿದೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್