ದೋಹಾ: ಭಾರತ ಸೇರಿದಂತೆ ರೆಡ್ಲಿಸ್ಟ್ ನಲ್ಲಿರುವ ದೇಶಗಳಿಂದ ಬರುವವರಿಗೆ ದೋಹಾ ವಿಮಾನ ನಿಲ್ದಾಣದಲ್ಲಿ ಕಡ್ಡಾಯ ಆರ್ಟಿಪಿಸಿಆರ್ ಪರೀಕ್ಷೆಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವರ್ಗಾಯಿಸಲಾಗುತ್ತಿದೆ.
ಹೊಸ ಹೊಸ ನಿಯಮ ಪ್ರಕಾರ ದೋಹಾದಲ್ಲಿ ಇಳಿದ 36 ಗಂಟೆಗಳ ಒಳಗೆ ಪರೀಕ್ಷೆಯನ್ನು ನಡೆಸಬೇಕು.
ಈ ಹಿಂದೆ,ರೆಡ್ಲಿಸ್ಟ್ ದೇಶಗಳಿಂದ ಖತಾರ್ಗೆ ಆಗಮಿಸುವವರು ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಟ್ಟ ನಂತರವೇ ದೋಹಾ ವಿಮಾನ ನಿಲ್ದಾಣದಿಂದ ಹೊರಹೋಗಲು ಅನುಮತಿಸಲಾಗುತ್ತಿತ್ತು.ಅದಕ್ಕಾಗಿ ವಿಮಾನ ನಿಲ್ದಾಣದ ಒಳಗೆ ಪರೀಕ್ಷಾ ಸೌಲಭ್ಯವನ್ನು ಸ್ಥಾಪಿಸಲಾಗಿತ್ತು.
ಇದೀಗ, ದೋಹಾದಲ್ಲಿ ಇಳಿದ 36 ಗಂಟೆಗಳ ಒಳಗೆ ಪರೀಕ್ಷೆಯನ್ನು ನಡೆಸಬೇಕು. ಇದರ ಭಾಗವಾಗಿ ವಿಮಾನ ನಿಲ್ದಾಣಕ್ಕೆ ಬರುವ ಎಲ್ಲ ಪ್ರಯಾಣಿಕರ ವಿವರಗಳನ್ನು ಪಿಎಚ್ಸಿಸಿಗಳಿಗೆ ರವಾನಿಸಲಾಗುತ್ತದೆ.ವಿಮಾನ ನಿಲ್ದಾಣದ ಅಧಿಕಾರಿಗಳು ಪ್ರಯಾಣಿಕರ ದಾಖಲೆಗಳಲ್ಲಿ ವಿಶೇಷ ಸ್ಟಿಕ್ಕರ್ ಅಂಟಿಸಿದ್ದಾರೆ.
ಪ್ರಸ್ತುತ 18 ಪಿಎಚ್ಸಿಸಿಗಳಲ್ಲಿ ಲಭ್ಯವಿದೆ. ಜುಲೈ 26 ರ ನಂತರ 27 ಕೇಂದ್ರಗಳಲ್ಲಿ ಸೌಲಭ್ಯ ಒದಗಿಸಲು ನಿರ್ಧರಿಸಲಾಗಿದೆ. ಪರೀಕ್ಷೆಯ ಶುಲ್ಕ 300 ಕತಾರ್ ರಿಯಾಲ್ಸ್. ವಯಸ್ಕರು ಮತ್ತು ಮಕ್ಕಳಿಗೆ ಪರೀಕ್ಷೆ ಕಡ್ಡಾಯವಾಗಿದೆ. ಪರೀಕ್ಷೆಗೆ ಹಾಜರಾಗದವರ ಹೆಸರನ್ನು ಅಧಿಕಾರಿಗಳಿಗೆ ಹಸ್ತಾಂತರಿಸುವಂತೆ ಪಿಎಚ್ಸಿಸಿಗಳಿಗೆ ನಿರ್ದೇಶಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ