ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದು,ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದಿಂದ ನೇರವಾಗಿ ತೆರಳಿ ರಾಜೀನಾಮೆ ನೀಡಿದ್ದಾರೆ.
ಇಂದು ಬಿಜೆಪಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಗದ್ಗಿತರಾಗಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ,ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ರಾಜಭವನಕ್ಕೆ ಹೋಗಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡುತ್ತೇನೆ ಎಂದು ಹೇಳಿದ್ದರು.
ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದಕ್ಕೆ ಶಿಕಾರಿಪುರದ ಜನತೆ ನನ್ನನ್ನು ಏಳು ಭಾರಿ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಕರ್ನಾಟಕದ ಜನತೆ ನನ್ನನ್ನು ಕೈಬಿಡಲಿಲ್ಲ. ಲಕ್ಷಾಂತರ ಬಿಜೆಪಿ ಕಾರ್ಯಕರ್ತರು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣ ಎಂದು ಹೇಳಿದರು.
ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಅಧಿಕಾರಕ್ಕೆ ಅವಕಾಶ ಕೊಡಲ್ಲ ಆದರೆ ಜೆ.ಪಿ. ನಡ್ಡಾ ಅವರು ನನಗೆ 2 ವರ್ಷ ಮುಖ್ಯಮಂತ್ರಿ ಆಗಲು ಅವಕಾಶ ಮಾಡಿಕೊಟ್ಟರು. ಪ್ರಧಾನಿ ಮೋದಿ, ಅಮಿತ್ ಶಾ ಜೋಡಿ ಮತ್ತೊಮ್ಮೆ ಲೋಕಸಭೆ ಚುನಾವಣೆಯಲ್ಲಿ ಗೆದ್ದು ದೇಶವನ್ನು ಮುನ್ನಡೆಸುವ ಅವಕಾಶ ಸಿಗಬೇಕು ಎಂದರು.
ರಾಜೀನಾಮೆ ನೀಡುದಾಗಿ ಘೋಷಿಸುವ ವೇಳೆ ಯಡಿಯೂರಪ್ಪ ಭಾವುಕರಾಗಿದ್ದಾರೆ. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸುತ್ತೇನೆ ಎಂದು ತಿಳಿಸಿದ ಅವರು, ದುಃಖದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿಲ್ಲ. ಸಂತೋಷದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವೆ ಎಂದು ಹೇಳಿದ್ದಾರೆ.
ಸಮರ್ಥನಾದ ಒಬ್ಬ ನಾಯಕ ಈ ಕರ್ನಾಟಕ ರಾಜ್ಯ ಕ್ಕೆ ಅನಿವಾರ್ಯವಾಗಿ.